ರಂಗಾರೆಡ್ಡಿ (ತೆಲಂಗಾಣ):ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಜವರಾಯನ ರೂಪದಲ್ಲಿ ಬಂದ ಕಾರು ಚಾಲಕ ಈ ಸಹೋದರಿಯರ ಪ್ರಾಣವನ್ನು ಕಸಿದುಕೊಂಡಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಪ್ರೇಮಿಕಾ ಹಾಗೂ ಅಕ್ಷಯಾ ಸಹೋದರಿಯರು ಮೃತಪಟ್ಟಿದ್ದು, ಅವರ ಸಂಬಂಧಿ ಸೌಮ್ಯಾ ಅಪಘಾತದಲ್ಲಿ ಭಾರಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್​​ನ ರೆಡ್ಡಿಪಲ್ಲಿ ಗ್ರಾಮದ ಶಿಕ್ಷಕ ಲಕ್ಷ್ಮಣ್​​ ಅವರ ಇಬ್ಬರೂ ಮಕ್ಕಳು ಮೃತ ದುರ್ದೈವಿಗಳು. ಪ್ರೇಮಿಕಾ ಹಾಗೂ ಅಕ್ಷಯಾ ದೊಡ್ಡಪ್ಪನ ಮಗಳು ಸೌಮ್ಯಾ ಜತೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಕಾರು ಚಾಲಕ ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಮೂವರೂ ಕೆಳಕ್ಕೆ ಬಿದ್ದಿದ್ದಾರೆ, ಬಿದ್ದ ರಭಸದಲ್ಲಿ ಪ್ರೇಮಿಕಾ ಸ್ಥಳದಲ್ಲಿಯೇ ಮೃತಪಟ್ಟರೆ, ಅಕ್ಷಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಸೌಮ್ಯಾಳಿಗೆ ಚಿಕಿತ್ಸೆ ಮುಂದುವರೆದಿದೆ. ಈಕೆಯ ಸ್ಥಿತಿ ಗಂಭೀರವಾಗಿದ್ದು, ಸಾವು – ಬದುಕಿನ ಮಧ್ಯೆ ಹೋರಾಟ ನಡೆಸಿರುವುದಾಗಿ ಹೇಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಅತಿಯಾದ ವೇಗದಿಂದ ಆತ ಕಾರು ಚಲಾಯಿಸುತ್ತಿದ್ದ. ಇದರಿಂದ ಅಪಘಾತ ಸಮಭವಿಸಿದೆ. ಆದಷ್ಟು ಬೇಗ ಆತನ ಬಂಧಿಸಲಾಗುವುದು ಎಂದಿದ್ದಾರೆ. ಎರಡೂ ಮಕ್ಕಳನ್ನು ಕಳೆದುಕೊಂಡ ಅಪ್ಪ-ಅಮ್ಮನ ಕಣ್ಣೀರು ಮಾತ್ರ ನೋಡಲಾಗುತ್ತಿಲ್ಲ.
ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ: ಐವರ ಸಾವು- ಹಲವರ ಸ್ಥಿತಿ ಚಿಂತಾಜನಕ

ಪ್ರಾಣ ಕಸಿದುಕೊಂಡ ಮಿಸ್‌ ಕಾಲ್‌! ಪತಿಯಿಂದ ಬರ್ಬರ ಹತ್ಯೆ- ಹೊಳೆನರಸೀಪುರದಲ್ಲಿ ಭಯಾನಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
