ನವದೆಹಲಿ:ನ್ಯಾಷನಲ್​ ಹೆರಾಲ್ಡ್​ ಪತ್ರಿಕೆಯ ಕೋಟ್ಯಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಯಲಯದ (ಇ.ಡಿ) ಮುಂದೆ ಕೊನೆಗೂ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಬೆಳಗ್ಗೆ ಹಾಜರು ಆದರು.
ಈ ಹಿಂದೆ, ಇ.ಡಿ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ ತಕ್ಷಣವೇ ಸೋನಿಯಾ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರ ವಿಚಾರಣೆಗೆ ಬರುವಂತೆ ಮತ್ತೊಮ್ಮೆ ಇಡಿ ನಿರ್ದೇಶಿಸಿದ ನಂತರ ಕೋವಿಡ್​ ತೀವ್ರ ಸ್ವರೂಪ ಪಡೆದು ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ನಂತರ ಶ್ವಾಸನಾಳ ಸೋಂಕು ಉಂಟಾಗಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬೇಕಿದೆ ಎಂದು ವೈದ್ಯರು ತಿಳಿಸಿದ್ದರು. ಕೊನೆಗೂ ಜೂನ್ ಮಧ್ಯ ಭಾಗದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಸೋನಿಯಾ ಅವರು, ವಿಚಾರಣೆಗೆ ಹಾಜರಾಗಲು ಇನ್ನಷ್ಟು ಕಾಲಾವಕಾಶ ಕೇಳಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅವರ ಹಾಜರಾತಿಯನ್ನು ಕಡ್ಡಾಯ ಮಾಡಲಾಗಿತ್ತು. ಎರಡು ಗಂಟೆಗಳ ವಿಚಾರಣೆ ಬಳಿಕ ಸೋನಿಯಾ ಅವರು ವಿಶ್ರಾಂತಿ ಕೇಳಿದರು. ಕೋವಿಡ್​ ಹಿನ್ನೆಲೆಯಲ್ಲಿ ತಮಗೆ ಸುಸ್ತಾಗುತ್ತಿರುವುದಾಗಿ ಅವರು ತಿಳಿಸಿದರು. ಅವರ ಮನವಿಗೆ ಸ್ಪಂದಿಸಿದ ಇ.ಡಿ. ಅಧಿಕಾರಿಗಳು ಅವರನ್ನು ವಾಪಸ್​ ಕಳುಹಿಸಿದರು.
ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.
2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ.(ಏಜೆನ್ಸೀಸ್​)
ಇ.ಡಿ ಇಕ್ಕಳದಲ್ಲಿ ಸೋನಿಯಾ: ದೇಶಾದ್ಯಂತ ಭಾರಿ ಪ್ರತಿಭಟನೆ- ವೈರಲ್​ ಆಯ್ತು ಈ ಹಳೆಯ ವಿಡಿಯೋ

ಕಂಕುಳಿನ ಕೂದಲಿನಿಂದ ಕೋಟಿ ಕೋಟಿ ರೂ. ಗಳಿಸ್ತಾಳೆ ಈಕೆ- ಬೆವರೇ ಈಕೆಯ ಆದಾಯದ ಮೂಲವಂತೆ!

ಇ.ಡಿ ಇಕ್ಕಳದಲ್ಲಿ ಸೋನಿಯಾ: ದೇಶಾದ್ಯಂತ ಭಾರಿ ಪ್ರತಿಭಟನೆ- ವೈರಲ್​ ಆಯ್ತು ಈ ಹಳೆಯ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 15 =
Remember me
