ನವದೆಹಲಿ:ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಬೇಕಿದ್ದ ಸೋನಿಯಾಗಾಂಧಿಯವರಿಗೆ ನೋಟಿಸ್​ ಜಾರಿಯಾದ ಮಾರನೆಯ ದಿನ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ನಾಳೆ (ಸೋಮವಾರ) ಅವರು ಖುದ್ದು ಹಾಜರಿ ಆಗಬೇಕಿತ್ತು. ಆದರೆ ಇಂದು ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ ಎಂದು ಹೇಳಿದರು.
ಈ ನಡುವೆಯೇ ಇದೇ ಪ್ರಕರಣದಲ್ಲಿ ಸಂಸದ ರಾಹುಲ್​ ಗಾಂಧಿಯವರಿಗೂ ಇ.ಡಿ. ನೋಟಿಸ್​ ಜಾರಿ ಮಾಡಿದೆ. ವಿದೇಶಕ್ಕೆ ಹೋಗಿದ್ದ ರಾಹುಲ್​, ಅವಧಿ ಮುಗಿದರೂ ವಾಪಸ್​ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿಚಾರಣೆಯ ದಿನಾಂಕವನ್ನು ಮುಂದೂಡಿದ್ದ ಇ.ಡಿ. ನಾಳೆ (ಜೂನ್​ 14) ಹಾಜರಾಗುವಂತೆ ಹೇಳಿತ್ತು.
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ, ರಾಹುಲ್​ ಗಾಂಧಿ ಮಾತ್ರ ಹಾಜರಾಗುವುದು ಅನಿವಾರ್ಯವಾಗಿದೆ. ಆದರೆ ಕಾಂಗ್ರೆಸ್​ ಭಾರಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದ್ದು, ಖುದ್ದು ಹಾಜರಿಯನ್ನು ತಡೆಯಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.
ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಇದನ್ನು ಪ್ರತಿಭಟಿಸಿ ದೇಶದಾದ್ಯಂತ ಜಾರಿ ನಿರ್ದೇಶನಾಲಯದ ಸುಮಾರು 25 ಕಚೇರಿಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ವಿರೋಧದ ಧ್ವನಿಯನ್ನು ಅಡಗಿಸಲು ಇಡಿ ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಯನ್ನು ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
Congress interim president Sonia Gandhi admitted to Ganga Ram Hospital today owing to Covid-related issues. She is stable and will be kept at the hospital for observation, says Congress leader Randeep Singh Surjewalapic.twitter.com/AkDP5ncMg8— ANI (@ANI)June 12, 2022
Congress interim president Sonia Gandhi admitted to Ganga Ram Hospital today owing to Covid-related issues. She is stable and will be kept at the hospital for observation, says Congress leader Randeep Singh Surjewalapic.twitter.com/AkDP5ncMg8
ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.
2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ.
VIDEO: ಇದ್ದಕಿದ್ದ ಹಾಗೆ ಎದ್ದು ಬಂತು ನಮಸ್ತೆ ಸದಾ ವತ್ಸಲೆ- ದಿಢೀರ್ ಜಗತ್ಪ್ರಸಿದ್ಧನಾದ ಕೊಪ್ಪಳದ ಬಾಲಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 4 =
Remember me
