ನವದೆಹಲಿ:ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ದೆಹಲಿಯ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇವರು ಗುರುವಾರ (ಜುಲೈ 30) ಆಸ್ಪತ್ರೆಗೆ ದಾಖಲಾಗಿದ್ದರು. ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಾ.ಡಿ.ಎಸ್.ರಾಣಾ ಹೇಳಿದ್ದಾರೆ.
ಕರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ರಾಜಕೀಯ ಪರಿಸ್ಥಿತಿ ಕುರಿತಂತೆ ರಾಜ್ಯಸಭಾ ಸದಸ್ಯರೊಂದಿಗೆ ಕಳೆದ ಗುರುವಾರ ಇವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು. ಇದಾದ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲುಮಾಡಲಾಗಿತ್ತು.
ಇದನ್ನೂ ಓದಿ:ಇಂದು ಸೋನಿಯಾ ಗಾಂಧಿ ನಡೆಸಿದ ಸಭೆಯಲ್ಲೂ ಮತ್ತದೇ ‘ರಾಗಾ’: ರಾಹುಲ್​ ಗಾಂಧಿ ನಿರ್ಧಾರವೊಂದೇ ಬಾಕಿ
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೋನಿಯಾ ಗಾಂಧಿ ಪಕ್ಷದ ರಾಜ್ಯ ಸಭಾ ಸಂಸದರೊಂದಿಗೆ ನಡೆಯಲಿರುವ ವರ್ಚೂವಲ್ ಮೀಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್‌ ನಾಯಕರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
73 ವರ್ಷದ ಸೋನಿಯಾ ಗಾಂಧಿ ಅವರಿಗೆ ಫೆಬ್ರವರಿ ತಿಂಗಳಿನಲ್ಲಿಯೂ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್‌ ಸಂದರ್ಭದಲ್ಲಿ ಇವರು ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದರು. 2017ರ ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ಶಾಸಕನಿಗೆ ಕರೊನಾ ಸೋಂಕು: ಯು.ಟಿ.ಖಾದರ್‌ ಕ್ವಾರಂಟೈನ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + 11 =
Remember me
