ನವದೆಹಲಿ:ಸೋನಿಯಾ ಗಾಂಧಿ ಅವರ ತಾಯಿ ಪಾವ್ಲಾ ​ಮೈನೋ ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇದೇ 27ರಂದು ಅವರು ನಿಧನರಾಗಿದ್ದು, ನಿನ್ನೆ (ಮಂಗಳವಾರ) ಅಂತಿಮ ವಿಧಿವಿಧಾನ ಮುಗಿದಿರುವುದಾಗಿ ಕಾಂಗ್ರೆಸ್​ ನಾಯಕ ಜೈರಾಮ್​ ರಮೇಶ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಸದ್ಯ ಸೋನಿಯಾಗಾಂಧಿ ಅವರು ತಮ್ಮ ಮಕ್ಕಳಾದ ಪ್ರಿಯಾಂಕಾ ಮತ್ತು ರಾಹುಲ್​ ಜತೆ ವಿದೇಶದಲ್ಲಿದ್ದಾರೆ. ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳುತ್ತಿರುವುದಾಗಿ ಪಕ್ಷದ ಮೂಲಗಳು ಹೇಳಿದ್ದವು. ಆದರೆ ಅವರು ಯಾವ ದೇಶದಲ್ಲಿ ಇದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಲಿಲ್ಲ.
ಇದೇ ವೇಳೆ ಸೋನಿಯಾ ಅವರಿಗೆ ಮಾತೃವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಸೋನಿಯಾ ಅವರು, ಆಗಸ್ಟ್​ 23ರಂದು ಭೇಟಿಯಾಗಿ ಹೋಗಿದ್ದರು ಎನ್ನಲಾಗಿದೆ.
ಆಗಸ್ಟ್​ 28ರಂದು ನಡೆದ ಕಾಂಗ್ರೆಸ್​​ ಕಾರ್ಯಕಾರಣಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ವಿದೇಶದಿಂದಲೇ ಆನ್​ಲೈನ್​ ಮೂಲಕ ಸೋನಿಯಾ, ರಾಹುಲ್​ ಹಾಗೂ ಪ್ರಿಯಾಂಕಾ ಭಾಗವಹಿಸಿದ್ದರು. ಅಂದಿನ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣಾ ದಿನಾಂಕಕ್ಕೆ ಅನುಮೋದನೆ ನೀಡಲಾಗಿತ್ತು. ಸೆಪ್ಟೆಂಬರ್​ 4ರಂದು ದೆಹಲಿಯಲ್ಲಿ ಕಾಂಗ್ರೆಸ್​ ಸಮಾವೇಶ ಆಯೋಜಿಸಲಾಗಿದ್ದು, ಅಷ್ಟರ ಒಳಗೆ ಸೋನಿಯಾ ಕುಟುಂಬ ದೆಹಲಿಗೆ ವಾಪಸ್​ ಆಗಬಹುದು ಎನ್ನಲಾಗಿದೆ. (ಏಜೆನ್ಸೀಸ್​)
12 ಸಾವಿರ ರೂ.ಗಿಂತ ಕಡಿಮೆ ಬೆಲೆಯ ಮೊಬೈಲ್​ ಬ್ಯಾನ್​ ಆಗೋದು ನಿಜನಾ? ಸಚಿವರು ಹೇಳಿದ್ದೇನು ನೋಡಿ

55ರ ವರ- 18ರ ವಧು: ‘ನನ್ನನ್ನು ಹೆಚ್ಚಿಗೆ ಭೇಟಿಯಾಗಬೇಡ’ ಎಂದು ಹಾಡುತ್ತಲೇ ಲವ್​ಗೆ ಬಿದ್ದ ಜೋಡಿಯ ಕಥೆ ಇದು…

ಸುಪ್ರೀಂ ​ಮೆಟ್ಟಿಲೇರಿದ ಹುಬ್ಬಳ್ಳಿಯ ಈದ್ಗಾ ಮೈದಾನದ ಗಣೇಶೋತ್ಸವ: ಹೈಕೋರ್ಟ್​ತೀರ್ಪು ಪ್ರಶ್ನಿಸಿ ಮೇಲ್ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eight =
Remember me
