ರಾಮೇಶ್ವರ (ತಮಿಳುನಾಡು):ರಾಮೇಶ್ವರದಲ್ಲಿ ಒಂದು ಸೂರ್ಯನ ಸುತ್ತ ಪ್ರಭಾವಳಿ ಮೂಡಿದ್ದು, ಜನರು ಈ ದರ್ಶನ ಪಡೆದು ಪುಳಕಿತರಾದರು.
ಸುಮಾರು ಅರ್ಧ ಗಂಟೆ ಈ ಪ್ರಭಾವಳಿ ಕಾಣಿಸಿಕೊಂಡಿದೆ. ಆದರೆ ಇದಕ್ಕೆ ನಿಖರವಾಗಿರುವ ಕಾರಣವೇನು ಎಂದು ತಿಳಿದುಬಂದಿಲ್ಲ.
ಈ ವಿಷಯ ಕ್ಷಣ ಮಾತ್ರದಲ್ಲಿ ಭಾರಿ ಸುದ್ದಿಯಾಗುತ್ತಿದ್ದಂತೆಯೇ ಸ್ಥಳೀಯರು ಮನೆಯಿಂದ ಹೊರಕ್ಕೆ ಓಡೋಡಿ ಬಂದು ಈ ದೃಶ್ಯವನ್ನು ಕಣ್ತುಂಬಿಸಿಕೊಂಡಿದ್ದಾರೆ. ಇಂಥದ್ದೊಂದು ಅಪರೂಪದ ವಿದ್ಯಮಾನಕ್ಕೆ ಅವರು ಸಾಕ್ಷಿಯಾಗಿದ್ದಾರೆ.
ಸಾಮಾನ್ಯವಾಗಿ ಈ ರೀತಿಯ ಪ್ರಭಾವಳಿ ಮೂಡುವುದಕ್ಕೆ ವೈಜ್ಞಾನಿಕ ಕಾರಣ ಇದೆ. ಅದೇನೆಂದರೆ ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.
#WatchRameswaram: A bright 'Halo' around the sun was spotted in the sky around noon today. Locals enjoyed the spectacle in the sky for more than half an hour.#TamilNadupic.twitter.com/GtRXwoXVxZ
— ANI (@ANI)August 3, 2020

ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ.
ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣವು ಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ, ಆಕರ್ಷಕ ಕಾಮನಬಿಲ್ಲು ಗೋಚರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು. ವಿಭಿನ್ನ ಸ್ಥಳಗಳಲ್ಲಿ ವಿಭಿನ್ನ ಸಮಯದಲ್ಲಿ ಇದು ಗೋಚರಿಸುತ್ತದೆ.
ಮಹಿಳೆಯರ ಶೌಚಗೃಹ ಶುಚಿಗೊಳಿಸಿ ಅಧಿಕಾರಿಗಳಿಗೆ ಪಾಠ ಕಲಿಸಿದ ಸಚಿವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
