ಚೆನ್ನೈ:ಕಳೆದೊಂದು ತಿಂಗಳಿನಿಂದ ಕರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ.
ಕರೊನಾ ಸೋಂಕಿಗೆ ಒಳಗಾಗಿದ್ದ ಇವರನ್ನು ಕಳೆದ ಆಗಸ್ಟ್​ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಧಾಖಲು ಮಾಡಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್​ ಎಂದು ಬಂದಿದ್ದರೂ, ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ಇದೀಗ ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದಾಗಿ ಅವರ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
https://www.instagram.com/tv/CFHed3ShlHZ/?utm_source=ig_embed
ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ ಮಗ ಚರಣ್.
ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾದಾಗ ಗಾನಗಂಧರ್ವ ಬಹುಬೇಗ ಚೇತರಿಸಿಕೊಳ್ಳಲಿ ಎಂದು ದೇಶಾದ್ಯಂತೆ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ಆಸ್ಪತ್ರೆಯಲ್ಲಿ ಕೂಡ ಇವರಿಗೆ ಸಂಗೀತದ ಮೂಲಕವೇ ಚಿಕಿತ್ಸೆಯನ್ನೂ ನೀಡಲಾಗಿತ್ತು. ಎಲ್ಲರ ಪ್ರಾರ್ಥನೆಗೆ ಇದೀಗ ಫಲ ಸಿಕ್ಕಿದೆ. ತಂದೆಯವರು ಬಹುಬೇಗ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂಬ ವಿಶ್ವಾಸವನ್ನು ಮಗ ಹೊಂದಿದ್ದಾರೆ.
ರಾಗಿಣಿಯ ಕನಸಿನ ಮನೆ ಮಾರಾಟಕ್ಕಿದೆ! ಮಗಳ ನಶೆನಂಟಿಗೆ ನಲುಗಿಹೋದ ಅಪ್ಪ

https://www.vijayavani.net/s-sanjana-mobile-without-sim/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − 7 =
Remember me
