ನವದೆಹಲಿ:ರಷ್ಯಾದ ಆಕ್ರಮಣದಿಂದಾಗಿ ತತ್ತರಿಸಿಹೋಗಿದ್ದ ಯೂಕ್ರೇನ್​ನಲ್ಲಿ ಭಾರತದ ವಿದ್ಯಾರ್ಥಿಗಳು ಸೇರಿದಂತೆ ಹಲವು ದೇಶದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ಹಾಕಿಕೊಂಡಿದ್ದರು. ತಮ್ಮ ಜೀವ ಉಳಿದರೆ ಸಾಕು, ಭಾರತಕ್ಕೆ ಯಾವಾಗ ಬಂದು ಮುಟ್ಟುತ್ತೇವೆಯೋ ಎಂದು ಕಾದಿದ್ದ ಈ ವಿದ್ಯಾರ್ಥಿಗಳನ್ನು ಯುದ್ಧ ಭೀತಿಯ ನಡುವೆಯೇ ಭಾರತೀಯ ಸೇನೆಯು ವಾಪಸ್​ ಕರೆದುಕೊಂಡು ಬಂದಿತ್ತು. ಓರ್ವ ವಿದ್ಯಾರ್ಥಿ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವುದನ್ನು ಬಿಟ್ಟರೆ ಉಳಿದ 18 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡನ್ನು ತಲುಪಿದ್ದಾರೆ.
ಈಗ ಈ ಎಲ್ಲಾ ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ ಶುರುವಾಗಿದೆ. ಇದಕ್ಕೆ ಕಾರಣ, ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು!
ನಿನ್ನೆಯಿಂದ (ಜುಲೈ 23) ದೆಹಲಿಯ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿರುವ ವಿದ್ಯಾರ್ಥಿಗಳು, ಒಟ್ಟು 5 ದಿನಗಳವರೆಗೆ ಉಪವಾಸ ನಡೆಸುವುದಾಗಿ ಹೇಳಿದ್ದಾರೆ. ನಾವು ನಮ್ಮ ಶೈಕ್ಷಣಿಕ ಭವಿಷ್ಯ ಕಳೆದುಕೊಳ್ಳುವ ಆತಂಕದಲ್ಲಿ ಇದ್ದೇವೆ. ಇದರಿಂದ ಖಿನ್ನತೆಗೆ ಒಳಗಾಗಿದ್ದೇವೆ. ತಮ್ಮ ಭವಿಷ್ಯ ಉಳಿಸಬೇಕು. ಅದಕ್ಕಾಗಿ ಸರ್ಕಾರ ನಮಗೆ ಸಹಾಯ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಮೂಲಕ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ವಿದ್ಯಾರ್ಥಿಗಳು, ನಾವು ಜಂತರ್ ಮಂತರ್‌ನಲ್ಲಿ ಮೂರು ಬಾರಿ, ದ್ವಾರಕದಲ್ಲಿನ ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಚೇರಿಯಲ್ಲಿ, ಪ್ರಧಾನಮಂತ್ರಿ ಕಚೇರಿ, ಆರೋಗ್ಯ ಸಚಿವಾಲಯ, ಶಿಕ್ಷಣ ಸಚಿವಾಲಯ ಕಚೇರಿಗಳ ಮುಂದೆ ಪ್ರತಿಭಟನೆ ಮಾಡಿದ್ದೇವೆ. ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಭರವಸೆ ಇಲ್ಲ. ಅನಿವಾರ್ಯ ಕಾರಣಗಳಿಂದಾಗಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸರಿಸುಮಾರು 12 ಸಾವಿರ ವಿದ್ಯಾರ್ಥಿಗಳು ಇದ್ದು, 600 ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸಂಸ್ಥೆಯು ಸುಮಾರು 20 ವಿದ್ಯಾರ್ಥಿಗಳನ್ನು ವ್ಯವಸ್ಥೆಗೊಳಿಸಬಹುದು ಎನ್ನುವುದು ಅವರ ಲೆಕ್ಕಾಚಾರ.(ಏಜೆನ್ಸೀಸ್​)
VIDEO: ಇಂದು ‘ವಿಶ್ವನಾಥೋತ್ಸವ’! ಮೂರು ಟನ್​ ಮಟನ್​, ಐದು ಟನ್​ ಚಿಕನ್​, ಲಕ್ಷ ಲಕ್ಷ ಮೊಟ್ಟೆ….

VIDEO: ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಜಾಜಿಸುತ್ತಿವೆ ಬಿಜೆಪಿ ಧ್ವಜಗಳು! ಕೈ ಕಾರ್ಯಕರ್ತರು ಗಪ್​ಚುಪ್​

ಛೇ! 3 ವರ್ಷ ಮೊದ್ಲೇ ಹುಟ್ಟ​ಬಾರದಿತ್ತಾ? ಕೈಗೆ ಬಂದಿದ್ದ 33 ಲಕ್ಷ ರೂ.ಸಂಬಳದ ಉದ್ಯೋಗ ಕಳಕೊಂಡ ಈತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 15 =
Remember me
