ನವದೆಹಲಿ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅಗ್ನಿಪಥ್ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್​ ದೆಹಲಿ ಹೈಕೋರ್ಟ್​ಗೆ ವರ್ಗಾಯಿಸಿದೆ. ಅಗ್ನಿಪಥ್​ ಯೋಜನೆಗೆ ಸಂಬಂಧಿಸಿದಂತೆ ಇದಾಗಲೇ ದೆಹಲಿ ಹೈಕೋರ್ಟ್​ನಲ್ಲಿ ಕೆಲವೊಂದು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಅರ್ಜಿಗಳನ್ನು ಒಟ್ಟಿಗೇ ಹೈಕೋರ್ಟ್​ ನಡೆಸಲಿ ಎಂದು ಸುಪ್ರೀಂಕೋರ್ಟ್​ ಹೇಳಿದೆ.
ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ವಿಲೇವಾರಿ ಮಾಡುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ. ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಗ್ನಿಪಥ ಯೋಜನೆ ನಿಷೇಧಿಸಬೇಕು, ಇವುಗಳ ಕುರಿತು ಪುನರ್​ ಪರಿಶೀಲನೆ ಮಾಡಬೇಕು ಹಾಗೂ ಈ ಯೋಜನೆಯನ್ನು ಶಾಶ್ವತವಾಗಿ ರದ್ದು ಮಾಡಬೇಕು ಎಂದು ಮೂರು ಪ್ರತ್ಯೇಕ ಅರ್ಜಿ ಸಲ್ಲಿಕೆಯಾಗಿತ್ತು. ಈಗಾಗಲೇ ಸೇನಾ ಉದ್ಯೋಗ ಪಡೆಯುವ ಪ್ರಕ್ರಿಯೆಯಲ್ಲಿರುವವರಿಗೆ ಈ ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಅರ್ಜಿದಾರರು ಹೇಳಿದ್ದರು.
ಇದನ್ನು ದೆಹಲಿ ಹೈಕೋರ್ಟ್​ಗೆ ವರ್ಗಾಯಿಸಿ ನ್ಯಾಯಮೂರ್ತಿಗಳು ಆದೇಶ ಹೊರಡಿಸುತ್ತಿರುವಾಗ ಅರ್ಜಿದಾರ ಮನೋಹರ್ ಲಾಲ್ ಶರ್ಮಾ ಏನನ್ನೋ ಹೇಳಲು ಮುಂದಾದರು. ಆಗ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಅಸಮಾಧಾನ ವ್ಯಕ್ತಪಡಿಸಿ, ನೀನು ಧೈರ್ಯಶಾಲಿಯಾಗಿರಬಹುದು, ಆದರೆ ಅಗ್ನಿವೀರ್ ಅಲ್ಲ ಎಂಬುದುನ್ನು ನೆನಪಿಡಿ. ನೀವು ಮುಂದೆ ಕೂಡ ಅಗ್ನಿವೀರರಾಗುವುದಿಲ್ಲ. ಆದ್ದರಿಂದ ಅನಗತ್ಯವಾಗಿ ಅಡ್ಡಿಪಡಿಸಬೇಡಿ. ತಾಳ್ಮೆಯಿಂದಿರಿ ಎಂದು ತರಾಟೆಗೆ ತೆಗೆದುಕೊಂಡರು.
ಅಂದ ಹಾಗೆ, ಅಗ್ನಿಪಥ್ ಯೋಜನೆ ವಿರುದ್ಧ ವಿವಿಧ ಹೈಕೋರ್ಟ್‌ಗಳಲ್ಲಿ 6 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಒಂದೇ ಸ್ಥಳದಲ್ಲಿ ನಡೆಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್​, ಎಲ್ಲವನ್ನೂ ದೆಹಲಿ ಹೈಕೋರ್ಟ್​ಗೆ ವರ್ಗಾಯಿಸಿದೆ.(ಏಜೆನ್ಸೀಸ್​)
VIDEO: ಭೂತ, ಪಿಶಾಚಿ, ಪ್ರೇತಾತ್ಮ ಇದೆ ಎಂದು ನಂಬದವರನ್ನೂ ಬೆಚ್ಚಿಬೀಳಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ನಿಮ್ಮ ಎಕ್ಸ್​ಗಳ ಜತೆ ಮಂಚಕ್ಕೆ ಹೋಗುವಿರಾ ಎಂದು ನಟಿಯರನ್ನು ಪ್ರಶ್ನಿಸಿದ ಕರಣ್​: ಸಾರಾ-ಜಾಹ್ನವಿ ಉತ್ತರ ಹೀಗಿತ್ತು!

ಭಾರತಕ್ಕೂ ಮತ್ತೊಂದು ಗಂಡಾಂತರ? ಮುನ್ನೆಲೆಗೆ ಬಂದ ಅತೀಂದ್ರಿಯ ಭವಿಷ್ಯಗಾರ್ತಿ ಬಾಬಾ ವಂಗಾ ವಾಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
