ನವದೆಹಲಿ:ಕರೊನಾ ವೈರಸ್​ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಹಾಗೂ ಹಲವು ರಾಜ್ಯಗಳ ಹೈಕೋರ್ಟ್​ಗಳಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುತ್ತಿದೆ. ಮನೆಯಲ್ಲಿಯೇ ಕುಳಿತು ವಿಚಾರಣೆಗೆ ಹಾಜರಾಗುವ ವಕೀಲರ ಅಸಭ್ಯ ವರ್ತನೆ ಈಗಲೂ ಮುಂದುವರೆದಿದ್ದು, ಇದೀಗ ಇದು ಸುಪ್ರೀಂಕೋರ್ಟ್​ ಕೆಂಗಣ್ಣಿಗೆ ಗುರಿಯಾಗಿದೆ.
ವಕೀಲರ ಇಂಥ ಕೃತ್ಯ ಕ್ಷಮಿಸಲಾಗದ್ದು ಎಂದಿದೆ. ಸುದರ್ಶನ್‌ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದ ವಕೀಲರೊಬ್ಬರು ಷರ್ಟ್​ ಧರಿಸಿರಲಿಲ್ಲ. ಇದನ್ನು ಗಮನಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್‌ ಹಾಗೂ ಇಂದು ಮಲ್ಹೋತ್ರ ಅವರಿದ್ದ ಪೀಠವು ಈ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಒನ್​ವೇ ಲವ್​? ನಟಿಯ ಮೇಲೆ ನಿರ್ಮಾಪಕನಿಂದ ಹಲ್ಲೆ
”ವಕೀಲರ ಕಾಯ್ದೆಯ ಅನ್ವಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವಕೀಲರು ಸಮವಸ್ತ್ರ ಧರಿಸುವುದು ಕಡ್ಡಾಯ. ಆದರೆ ಹಲವಾರು ವಕೀಲರು ಬೇಜಬ್ದಾರಿಯಿಂದ ವರ್ತಿಸುತ್ತಿದ್ದಾರೆ. ನ್ಯಾಯಾಲಯದ ಬಗ್ಗೆ ವಕೀಲರ ಈ ರೀತಿಯ ವರ್ತನೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲಎಂದು ನ್ಯಾಯಮೂರ್ತಿಗಳು ಹೇಳಿದರು.
ವಕೀಲರ ನಡವಳಿಕೆಗೆ ಬೇಸತ್ತ ಪೀಠ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.
ಕಳೆದ ಸೆಪ್ಟೆಂಬರ್‌ನಲ್ಲಿ ವಿಚಾರಣೆಯ ಸಮಯದಲ್ಲಿ ಸಿಗರೇಟ್‌ ಸೇದುತ್ತಿದ್ದ ವಕೀಲನಿಗೆ ಗುಜರಾತ್‌ ಹೈಕೋರ್ಟ್‌ ಹತ್ತು ಸಾವಿರ ರೂ. ದಂಡ ವಿಧಿಸಿತ್ತು. ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನ ಹೈಕೋರ್ಟ್‌ ವಿಚಾರಣೆಗೆ ಆನ್‌ಲೈನ್‌ ಮೂಲಕ ಹಾಜರಾಗಿದ್ದ ವಕೀಲರೊಬ್ಬರು ಬನಿಯನ್‌ನಲ್ಲಿ ಕಾಣಿಸಿಕೊಂಡಿದ್ದರು.
ಕಾಲೇಜು ಯುವತಿ ಮೇಲೆ ಗುಂಡಿನ ದಾಳಿ- ಸಿಸಿಟಿವಿಯಲ್ಲಿ ದಾಖಲಾಯ್ತು ಭಯಾನಕ ದೃಶ್ಯ

ಮನುಷ್ಯರ ವೃಷಣ ಕತ್ತರಿಸಿ ಹಸಿಹಸಿ ತಿನ್ನುವ ‘ವೈದ್ಯರು’ ಇವರು! ಫ್ರಿಜ್​ನಲ್ಲಿತ್ತು ಭಯಾನಕ ಸತ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + fourteen =
Remember me
