ಕೊಚ್ಚಿ:ಅಕ್ರಮ ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಹಲವಾರು ಅಧಿಕಾರಿಗಳ ಬುಡಕ್ಕೆ ತಂದಿಟ್ಟಿರುವ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್‌ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.
ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಸುಮ್ಮನೇ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ನಾನು ತಪ್ಪು ಮಾಡದಿದ್ದರೂ ನನ್ನನ್ನು ಸಿಲುಕಿಸಲಾಗಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು ಸ್ವಪ್ನಾ ಮನವಿ ಮಾಡಿದ್ದರು.
ಇದನ್ನೂ ಓದಿ:ಸ್ಮಗ್ಲಿಂಗ್‌ ರಾಣಿಗೂ ಕೇರಳ ಸಿಎಂಗೂ ಇದೆ ಲಿಂಕ್‌: ತನಿಖೆಯಿಂದ ಬಯಲಾಯ್ತು ಸತ್ಯ
ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ.
ಸ್ವಪ್ನಾ ಸೇರಿದಂತೆ ರಾಜಕೀಯ ಘಟಾನುಘಟಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳೂ ಕೇಳಿಬಂದಿದ್ದು, ತನಿಖೆ ಮುಂದುವರೆದಿದೆ.
ಶುರುವಾಗಲಿದೆ ಕತ್ತೆಯ ಹಾಲಿನ ಡೈರಿ: ಬೆಲೆ ಕೇಳಿ ಮೂರ್ಛೆ ಹೋಗ್ಬೇಡಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + twelve =
Remember me
