ಚೆನ್ನೈ:ತಮಿಳುನಾಡಿನ ಸೇಲಂನ ಪೆರಿಯಾರ್​ ವಿಶ್ವವಿದ್ಯಾಲಯದ ಮೊದಲ ವರ್ಷದ ಇತಿಹಾಸ ವಿಷಯದ ಪರೀಕ್ಷಾ ಪ್ರಶ್ನೆಪತ್ರಿಕೆ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿರುವ ಜಾತಿ ಕುರಿತು ಪ್ರಶ್ನೆಯೊಂದು ವಿವಾದಕ್ಕೆ ಸಿಲುಕಿದೆ.
ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಯಲ್ಲಿ “ತಮಿಳುನಾಡಿಗೆ ಸೇರಿದ ಅತಿ ಕೆಳಜಾತಿ ಯಾವುದು?” ಎಂದು ಪ್ರಶ್ನಿಸಲಾಗಿದೆ. ಇದಕ್ಕೆ ಮಹರ್ಸ್​, ನದರ್ಸ್​, ಎಹ್ವಾಸ್​, ಹರ್ಜನ್ಸ್​ ಎಂಬ ನಾಲ್ಕು ಆಯ್ಕೆಗಳನ್ನೂ ನೀಡಲಾಗಿದೆ. ಈ ಪ್ರಶ್ನೆಯೇ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಪ್ರಶ್ನೆ ಮಾತ್ರವಲ್ಲದೇ ನೀಡಲಾಗಿರುವ ಆಪ್ಷನ್​ಗಳು ಕೂಡ ಜಾತಿಗಳನ್ನು ಕೀಳಾಗಿ ಕಾಣುವಂತೆ ಮಾಡಿದೆ ಎಂದು ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಇದು ಭಾರಿ ವಿವಾದ ಸೃಷ್ಟಿಸುತ್ತಲೇ ಸ್ಪಷ್ಟನೆ ನೀಡಿರುವ ಪೆರಿಯಾರ್​ ವಿವಿ ಕುಲಪತಿ ಆರ್​.ಜಗನ್ನಾಥ್​, ಇತರ ವಿಶ್ವವಿದ್ಯಾಲಯ ಮತ್ತು ಕಾಲೇಜು ಉಪನ್ಯಾಸಕರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುತ್ತಾರೆ. ಈ ಪ್ರಶ್ನೆ ಪತ್ರಿಕೆ ನಮ್ಮ ವಿವಿಯಿಂದ ಸಿದ್ಧಪಡಿಸಲಾಗಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಪ್ಪಿಸಲು ನಾವು ಪರೀಕ್ಷೆಯ ಮೊದಲು ಪ್ರಶ್ನೆಗಳನ್ನು ಪರಿಶೀಲಿಸುವುದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಮತ್ತು ಮರುಪರೀಕ್ಷೆ ನಡೆಸುವ ಬಗ್ಗೆ ಪರಿಗಣಿಸಲಾಗುವುದು” ಎಂದಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಎಂ.ಇಳಂಗೋ ಹೆನ್ರಿ ದಾಸ್ ಅವರ ನೇತೃತ್ವದಲ್ಲಿ ವಿವಾದಾತ್ಮಕ ಪ್ರಶ್ನೆಯ ತನಿಖೆಗಾಗಿ ತಂಡವನ್ನು ರಚಿಸಲಾಗಿದೆ. ಈ ಪ್ರಶ್ನೆಯನ್ನು ಪತ್ರಿಕೆಯಲ್ಲಿ ಆಯ್ಕೆ ಮಾಡಿದವರು ಯಾರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Tamil Nadu | 1st-year MA History students of Periyar University in Salem got asked in the exam, "Which one is the lower caste that belongs to Tamil Nadu?" with 4 options mentioning different castespic.twitter.com/kdJxQrMo5R— ANI (@ANI)July 15, 2022
Tamil Nadu | 1st-year MA History students of Periyar University in Salem got asked in the exam, "Which one is the lower caste that belongs to Tamil Nadu?" with 4 options mentioning different castespic.twitter.com/kdJxQrMo5R

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
