ಚೆನ್ನೈ:ಮುಂದಿನ ವರ್ಷ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ಹಿಂದೂ ಮತಗಳನ್ನು ಕ್ರೋಢಿಕರಿಸಲು ಬಿಜೆಪಿ ವೆಟ್ರಿವೇಲ್ ಯಾತ್ರೆ ನಡೆಸಲು ಮುಂದಾಗಿತ್ತು. ಇದಕ್ಕೆ ತಮಿಳುನಾಡಿನ ಸರ್ಕಾರ ಅನುಮತಿ ನೀಡಿರಲಿಲ್ಲ. ಇದರ ಹೊರತಾಗಿಯೂ ಯಾತ್ರೆ ನಡೆಸಿರುವ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿನ ತಿರುಟ್ಟಾನಿಯಲ್ಲಿ ವೆಟ್ರಿವೆಲ್ ಯಾತ್ರೆ ನಡೆಸಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಎಲ್ ಮುರುಗನ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಿರಿಯ ನಾಯಕ ಎಚ್.ರಾಜಾ ಸೇರಿದಂತೆ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಅಮೆರಿಕ ಅಧ್ಯಕ್ಷ ಚುನಾವಣೆ ಗಲಾಟೆ ನಡುವೆಯೇ ನಾಯಿಗೆ ದಕ್ಕಿತು ಮೇಯರ್‌ ಪಟ್ಟ!
ಯಾತ್ರೆ ಇಂದು ಅಂದರೆ ನವೆಂಬರ್ 6ರಂದು ತಿರುಟ್ಟಾನಿಯಿಂದ ಪ್ರಾರಂಭವಾಗಿ ಒಂದು ತಿಂಗಳ ನಂತರ ತಿರುಚೆಂದೂರಿನಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ ಕರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಯಾತ್ರೆಗೆ ಅನುಮತಿ ನಿರಾಕರಿಸಿದೆ.
ಆದರೂ ಯಾತ್ರೆ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ. ಯಾತ್ರೆಗೂ ಮೊದಲು ತಿರುಟ್ಟಾನಿ ಮುರುಗನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮುರುಗನ್ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಯಾತ್ರೆ ಹೊರಡಲು ಪ್ರಯತ್ನಿಸಿದಾಗ, ಪೊಲೀಸ್ ಸಿಬ್ಬಂದಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ವೇಳೆ ಪ್ರತಿಪಕ್ಷ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಮುರಗನ್ ಅವರು, ಡಿಎಂಕೆ ನಾಯಕರು ದಶಕಗಳಿಂದ ಹಿಂದೂ ಭಾವನೆಗಳನ್ನು ಧಕ್ಕೆ ತರುತ್ತಿದ್ದಾರೆ. ಮಹಿಳೆಯರನ್ನು ಅವಮಾನಿಸಿದವರನ್ನು ಡಿಎಂಕೆ ಬೆಂಬಲಿಸಿದೆ ಎಂದು ಆರೋಪಿಸಿದರು.
ಅಮೆರಿಕ ಚುನಾವಣೆ- ಜಾರ್ಜಿಯಾದಲ್ಲಿ ಕೊನೆ ಕ್ಷಣದಲ್ಲಿ ರೋಚಕ ತಿರುವು

ಚಿಲ್‌ ಡೊನಾಲ್ಡ್‌ ಚಿಲ್‌… ಟ್ರಂಪ್‌ ವಿರುದ್ಧ ಸೇಡು ತೀರಿಸಿಕೊಂಡ ಗ್ರೇಟಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two − 2 =
Remember me
