ಗುಂಟೂರು:ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಭೀಕರ ಹತ್ಯೆಯಾಗಿರುವ ಘಟನೆ ನಿನ್ನೆ ಭಾನುವಾರ ರಾತ್ರಿ ನಡೆದಿದೆ.
ಗುಂಟೂರು ಜಿಲ್ಲೆಯ ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ ಮಾಜಿ ಸರ್ಪಂಚ್ ಪುರನ್‌ಸೆಟ್ಟಿ ಅಂಕುಲು ಕೊಲೆಯಾದವರು. ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.
ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಈ ಹತ್ಯೆ ಹಿಂದೆ ರಾಜಕೀಯ ವೈಷಮ್ಯ ಇದೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಸಬ್‌ ಇನ್ಸ್‌ಪೆಕ್ಟರ್‌ ನಾಜಿರೆಡ್ಡಿಯವರು, ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ದಾಚೆಪಲ್ಲಿ ಅವರನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದಕ್ಕೆ ಎಳೆದೊಯ್ದಿರುವ ದುಷ್ಕರ್ಮಿಗಳು ಅವರ ಗಂಟಲನ್ನು ಸೀಳಿ ಕೊಲೆ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಈ ಕೊಲೆಯೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಇವರನ್ನು ವೈಎಸ್‌ಆರ್‌ಸಿಪಿ ಪಕ್ಷದ ನಾಯಕರೇ ಕೊಲೆ ಮಾಡಿದ್ದಾರೆ ಎಂದು ಟಿಡಿಪಿ ಮುಖಂಡರು ಆರೋಪಿಸುತ್ತಿದ್ದಾರೆ.
ಲಸಿಕೆಗೆ ಕೌಂಟ್​ಡೌನ್: ಕೊವ್ಯಾಕ್ಸಿನ್, ಕೋವಿಶೀಲ್ಡ್ ತುರ್ತು ಬಳಕೆಗೆ ಓಕೆ; ಶೀಘ್ರ ಜನರಿಗೆ ಲಭ್ಯ

ಚೀನಾದ ನಷ್ಟ ಭಾರತಕ್ಕೆ ಲಾಭವಾಗಬಹುದೇ?!; ಚಕ್ರವರ್ತಿ ಸೂಲಿಬೆಲೆ ಅವರ ಅಂಕಣ

ರಾಜಕೀಯದವರ ಒತ್ತಡವೇ ಗಂಗೂಲಿಗೆ ಹೀಗಾಗಲು ಕಾರಣ: ಮಾಜಿ ಸಚಿವನಿಂದ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 3 =
Remember me
