ನವದೆಹಲಿ:ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಜೈಲಿಗೆ ಹೋಗಿ ಈಗ ಜಾಮೀನಿನ ಮೇಲೆ ಹೊರಗಡೆ ಇರುವ ಸಂಸದೆ, ನಟಿ ನವನೀತ್ ರಾಣಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರಲ್ಲಿ ದೂರು ದಾಖಲು ಮಾಡಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ದೇಶದ್ರೋಹದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿರುವ ಸಂಸದೆಗೆ ಇದೀಗ ಬೆದರಿಕೆ ಕರೆಗಳು ಬಂದಿವೆ.
ತನ್ನ ವೈಯಕ್ತಿಕ ಮೊಬೈಲ್ ನಂಬರ್​ಗೆ 11 ಜೀವ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿರುವ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ನಿಂದಿಸಿದ್ದು, ಒಂದು ವೇಳೆ ಆಕೆ ಮಹಾರಾಷ್ಟ್ರಕ್ಕೆ ಬಂದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.
ದೂರು ಸ್ವೀಕರಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಶಾಸಕ ರವಿ ರಾಣಾ ಹಾಗೂ ಸಂಸದೆ ನವ್​ನೀತ್ ರಾಣಾ ದಂಪತಿ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಸೇನೆಯ ಕಾರ್ಯಕರ್ತರು ನಗರದ ಹಲವೆಡೆ ಜಮಾಯಿಸಿದ್ದಲ್ಲದೆ, ಮಾತೋಶ್ರೀ ಮುಂದೆಯೂ ಸೇರಿದ್ದರು. ಅಲ್ಲದೆ ಶಿವಸೇನೆ ಕಾರ್ಯಕರ್ತರ ದೂರಿನ ಮೇರೆಗೆ ಪೊಲೀಸರು ಇವರನ್ನು ಕಳೆದ ಏಪ್ರಿಲ್​ 23ರಂದು ಬಂಧಿಸಿದ್ದರು. ಇವರಿಗೆ ಮೇ 4ರಂದು ಕೋರ್ಟ್​ ಜಾಮೀನು ನೀಡಿದೆ.
ಪ್ರಧಾನಿ ಮೋದಿಗೆ ಪತ್ರ ಬರೆದ ‘ಜೊತೆ ಜೊತೆಯಲಿ…’ ಧಾರಾವಾಹಿ ನಟ ಅನಿರುದ್ಧ್​ ಹೇಳಿದ್ದೇನು?

ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!

ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ: ಹುಬ್ಬಳ್ಳಿ ಪೊಲೀಸರೂ ಗಪ್​ಚುಪ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
