ಮೀರತ್ (ಹರಿಯಾಣ):ರಸ್ತೆ ಮಧ್ಯೆ ಅಡ್ಡಲಾಗಿ ಹಾಕಲಾಗಿದ್ದ ವಿಭಜಕಕ್ಕೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್​ ವಿದ್ಯಾರ್ಥಿಗಳು ಸಜೀವವಾಗಿ ಸುಟ್ಟುಹೋಗಿರುವ ಭೀಕರ ಘಟನೆ ಹರಿಯಾಣದ ಮೀರತ್-ಝಜ್ಜರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರೋಹ್ಟಕ್​ನ ಪಿಜಿಐನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಯುವಕರು ರೋಹ್ಟಕ್​ನಿಂದ ಹರಿದ್ವಾರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಒಟ್ಟು ಆರು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ವೇಗವಾಗಿ ಕಾರನ್ನು ಓಡಿಸುತ್ತಿದ್ದ. ರಾಷ್ಟ್ರೀಯ ಹೆದ್ದಾರಿ-44ರ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಕಲ್ಲಿನ ಬ್ಯಾರಿಕೇಡ್‌ಗಳನ್ನು ರಸ್ತೆ ಮಧ್ಯೆ ಅಡ್ಡಲಾಗಿ ಅಳವಡಿಸಲಾಗಿತ್ತು. ಕತ್ತಲಲ್ಲಿ ಬ್ಯಾರಿಕೇಡ್‌ ಕಾಣಿಸಲಿಲ್ಲ. ವೇಗವಾಗಿದ್ದ ಕಾರು ಅದಕ್ಕೆ ಡಿಕ್ಕಿ ಹೊಡೆದಿದೆ.
ಈ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಮೂವರು ಅಲ್ಲಿಯೇ ಸುಟ್ಟು ಕರಕಲಾದರೆ ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ.
ರಸ್ತೆಗೆ ಅಡ್ಡಲಾಗಿ ಕಲ್ಲಿನ ಬ್ಯಾರಿಕೇಡ್​ಗಳನ್ನು ಯಾವುದೇ ಮುನ್ಸೂಚನೆ ಇಲ್ಲದೇ ಅಳವಡಿಸಿದ ಅಧಿಕಾರಿಗಳು ಮತ್ತು ಕಾಮಗಾರಿ ಗುತ್ತಿಗೆ ಪಡೆದ ಪಂನಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಂಡ್ತಿ, ಅವಳ ಫ್ರೆಂಡ್ಸ್​ ಕಾಟ ತಾಳಲಾರೆ: ಡೆತ್​ನೋಟ್​ ಬರೆದು ಮಗನ ಜತೆ ಟ್ರಕ್​ಗೆ ಗುದ್ದಿಸಿಕೊಂಡು ಆತ್ಮಹತ್ಯೆ!

ಮಹಿಳೆಯರು ಅಂದ್ರೆ ಅಲರ್ಜಿ: ಮುಟ್ಟಿದ್ರೆ ಸಾಕು ಮೂರ್ಛೆ ಹೋಗೋ ಅರ್ಚಕ- ಅಷ್ಟಕ್ಕೂ ಆಗಿದ್ದು ಇಷ್ಟೇ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
