ಅಫ್ಘಾನಿಸ್ತಾನ್‌:ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಹೆಚ್ಚುತ್ತಿರುವ ಬೆನ್ನಲ್ಲೇ ಬಿಗಿಯಾದ ಬಟ್ಟೆಗಳನ್ನು ಧರಿಸಿ ಒಂಟಿಯಾಗಿ ಹೋಗುತ್ತಿದ್ದ ಕಾರಣಕ್ಕೆ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಉತ್ತರ ಬಾಲ್ಖ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ.ಸದ್ಯ ಅನೇಕ ನಗರಗಳನ್ನು ವಶಕ್ಕೆ ಪಡೆದುಕೊಂಡಿರುವ ತಾಲಿಬಾಲಿಗಳು ಸಮರ್‌ಕಂಡ್‌ ಗ್ರಾಮವನ್ನೂ ವಶಕ್ಕೆ ಪಡೆದಕೊಂಡಿದ್ದಾರೆ. ಈ ಗ್ರಾಮದಲ್ಲಿನ ಯುವತಿಯೊಬ್ಬಳು ಈಗ ಉಗ್ರರ ಗುಂಡಿಗೆ ಬಲಿಯಾಗಿದ್ದಾಳೆ. ಪೊಲೀಸರ ಪ್ರಕಾರ, 21 ವರ್ಷದ ಸಂತ್ರಸ್ತೆಯನ್ನು ನಜಾನಿನ್ ಎಂದು ಗುರುತಿಸಲಾಗಿದೆ.ಯುವತಿ ಅಡಿಯಿಂದ ಮುಡಿಯವರೆಗೆ ಬುರ್ಖಾ ಧರಿಸಿದ್ದರೂ ಅದು ಟೈಟ್‌ ಆಗಿತ್ತು ಎನ್ನುವ ಕಾರಣಕ್ಕೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಭಾಗದಲ್ಲಿನ ಮಹಿಳೆಯರು ಹೊರಗೆ ಹೋಗುವಂತಿಲ್ಲ. ಅದರಲ್ಲಿಯೂ ಉದ್ಯೋಗ ಮಾಡುವುದಂತೂ ನಿಷೇಧ. ಆದರೆ ಯುವತಿ ಹೊರಕ್ಕೆ ಹೋಗಿದ್ದೂ ಅಲ್ಲದೇ ಟೈಟ್‌ ಡ್ರೆಸ್‌ ಧರಿಸಿದ್ದಳು ಎನ್ನುವ ಕಾರಣಕ್ಕೆ ಈ ಕೃತ್ಯ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಅಪ್ರಾಪ್ತ ಮೊಮ್ಮಗಳನ್ನು ರೇಪ್‌ ಮಾಡಿ ಗರ್ಭಿಣಿ ಮಾಡಿದವನಿಗೆ ಲೇಡಿ ಇನ್ಸ್‌ಪೆಕ್ಟರ್‌ಗಳ ನೆರವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
