ತಿರುಪತಿ:ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಿರುಪತಿ ಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತ ಉಂಟಾಗಿದೆ. ನಿನ್ನೆ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಬಸ್‌ ಬೆಟ್ಟ ಏರುವಷ್ಟರಲ್ಲಿಯೇ ಬಂಡೆಯೊಂದು ಉರುಳಿ ಬಿದ್ದಿದೆ. ಸ್ವಲ್ಪದಲ್ಲಿಯೇ ಬಸ್‌ ಮೇಲೆ ಬೀಳುವುದು ತಪ್ಪಿದ್ದರಿಂದ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬದುಕುಳಿದಿದ್ದಾರೆ.
ತಿರುಪತಿ ಬೆಟ್ಟದ 2ನೇ ಘಾಟ್‌ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಅಲಿಪಿರಿ ಸಮೀಪದ ಎರಡನೇ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಹಲವು ವಾಹನಗಳು ಜಖಂಗೊಂಡಿವೆ. ಸುಮಾರು ಅಡಿ ಎತ್ತರದಿಂದ ಬಂಡೆಗಳು ಉರುಳಿ ಬಿದ್ದ ಪರಿಣಾಮ ಹಲವು ಕಾರುಗಳು ಸೇರಿ ರಸ್ತೆಗಳು ಹಾನಿಗೊಳಗಾಗಿವೆ. ಐಐಟಿ ದೆಹಲಿಯ ತಜ್ಞರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ವಿಜಿಲೆನ್ಸ್, ಇಂಜಿನಿಯರಿಂಗ್ ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಬಂಡೆ ತೆಗೆಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮಳೆಯ ಮುನ್ಸೂಚನೆಯಿಂದಾಗಿ ಎರಡು ದಿನಗಳ ಕಾಲ ಘಾಟ್ ರಸ್ತೆಗಳನ್ನು ಮುಚ್ಚುವುದಾಗಿ ಟಿಟಿಡಿ ಈಗಾಗಲೇ ಘೋಷಿಸಿತ್ತು. ದುರಸ್ತಿ ಕಾರ್ಯದ ನಂತರ ಕೆಲವು ದಿನಗಳ ನಂತರ ಘಾಟ್ ರಸ್ತೆಗಳನ್ನು ವಾಹನ ಸಂಚಾರಕ್ಕೆ ತೆರೆಯಲಾಯಿತು. ಮೊದಲ ಘಾಟ್ ರಸ್ತೆಯಲ್ಲಿ ಅಕ್ಕಗರ್ಲ ದೇವಸ್ಥಾನದ ಬಳಿ ತಡೆಗೋಡೆಗೆ ಹಾನಿಯಾಗಿದ್ದು, ನಾಲ್ಕು ಕಡೆ ಬಂಡೆಗಳು ರಸ್ತೆಗೆ ಬಿದ್ದಿವೆ ಎಂದು ಟಿಟಿಡಿ ತಿಳಿಸಿದೆ. ಕಳೆದ 25 ವರ್ಷಗಳಲ್ಲೇ ಅತ್ಯಧಿಕ ಮಳೆಯನ್ನು ತಿರುಪತಿ ಭಾಗ ಕಂಡಿದೆ.
https://www.vijayavani.net/s-two-death-case-by-husband-in-mysore/
VIDEO: ನೇರಪ್ರಸಾರದಲ್ಲಿಯೇ ಟಿವಿ ವರದಿಗಾರ್ತಿಯ ಹಿಂಬದಿ ಮುಟ್ಟಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 6 =
Remember me
