ಹೂಗ್ಲಿ (ಪಶ್ಚಿಮ ಬಂಗಾಳ):ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖಂಡ, ಬಾನ್ಸ್‌ಬೆರಿಯಾ ಮುನ್ಸಿಪಾಲಿಟಿಯ ಮಾಜಿ ಉಪಾಧ್ಯಕ್ಷ ಆದಿತ್ಯ ನಿಯೋಗಿ ಅವರನ್ನು ಇಂದು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದಿದೆ.
ತರಕಾರಿ ಮಾರುಕಟ್ಟೆಯಲ್ಲಿ ಆದಿತ್ಯ ಅವರು ಖರೀದಿ ಮಾಡುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದಾರೆ. ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಗಂಭೀರ ಸ್ಥಿತಿಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಲ್ಲಿಂದ ಅವರನ್ನು ಕೋಲ್ಕತ್ತ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಲಾಗಿತ್ತು. ಅಲ್ಲಿಗೆ ಒಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಬಿಜೆಪಿ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಟಿಎಂಸಿ ಶಾಸಕ ತಪನ್ ದಾಸ್ ಗುಪ್ತ ಆರೋಪಿಸಿದ್ದರೆ, ಇದು ಆಡಳಿತ ಪಕ್ಷದೊಳಗಿನ ಗುಂಪುಗಾರಿಕೆ ದ್ವೇಷ ಎಂದು ಬಿಜೆಪಿ ಹೇಳಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.
ಕೋವಿಡ್‌ ನಿಯಮ ಉಲ್ಲಂಘಿಸಿ ವಾಹನ ಬಳಸಿ ಕ್ಯಾರೇ ಅನ್ನದೇ ತಿರುಗಾಟ – ಪಪ್ಪೂ ಅರೆಸ್ಟ್‌

ಹಣದ ಗೋಲ್‌ಮಾಲ್‌: ಮಾಜಿ ಗೃಹ ಸಚಿವನ ವಿರುದ್ಧ ಕೊನೆಗೂ ಕ್ರಿಮಿನಲ್‌ ಕೇಸ್‌ ದಾಖಲು

ಗಂಡನಿಗೆ ಪತ್ನಿಯ ಮೇಲೆ ದೈಹಿಕ ಕಾಮನೆಗಳೇ ಬರದುದಕ್ಕೆ ಕಾರಣಗಳು ಇವೆಲ್ಲಾ ಇರುತ್ತವಮ್ಮಾ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
