ಕೋಲ್ಕತಾ:ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವ-ಸಹಾಯ ಗುಂಪು ಮತ್ತು ಸ್ವ-ಉದ್ಯೋಗ ಇಲಾಖೆ ಸಚಿವ ಸಾಧನ್​ ಪಾಂಡೆ ಮೃತಪಟ್ಟಿದ್ದಾರೆ. ಇವರಿಗೆ 71 ವರ್ಷ ವಯಸ್ಸಾಗಿತ್ತು.
ಇವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. 2021ರ ಜುಲೈನಲ್ಲಿಯೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಮುಂಬೈಗೆ ಉತ್ತಮ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಸಾಧನೆ ಪಾಂಡೆ ನಿಧನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕರು, ಸಚಿವರಾಗಿದ್ದ ಸಾಧನ್​ ಪಾಂಡೆ ಇಂದು ಮುಂಜಾನೆ ನಿಧನರಾದರು. ಅವರ ನಿಧನದಿಂದ ತುಂಬ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು, ಅನುಯಾಯಿಗಳಿಗೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.
1998ರವರೆಗೆ ಕಾಂಗ್ರೆಸ್​​ನಲ್ಲಿದ್ದ ಸಾಧನ್​ ಪಾಂಡೆ 1998ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.
Our senior colleague, party leader and Cabinet Minister Sadhan Pande has passed away today morning at Mumbai. Had a wonderful relation for long. Deeply pained at this loss. My heartfelt condolences to his family, friends, followers.— Mamata Banerjee (@MamataOfficial)February 20, 2022
Our senior colleague, party leader and Cabinet Minister Sadhan Pande has passed away today morning at Mumbai. Had a wonderful relation for long. Deeply pained at this loss. My heartfelt condolences to his family, friends, followers.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 8 =
Remember me
