ನವದೆಹಲಿ:ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ತವರು ಪಂಜಾಬ್​ಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ರೈತರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.
ಇಂದು ಬೆಳಗ್ಗೆ ಹರಿಯಾಣದಲ್ಲಿನ ಕರ್ನಲ್ ಎಂಬಲ್ಲಿ ದೆಹಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಘಟನೆ ನಡೆದಿದೆ. ಟ್ರ್ಯಾಕ್ಟರ್​ನಲ್ಲಿ ರೈತರು ಬರುತ್ತಿದ್ದರು. ಆ ಸಮಯದಲ್ಲಿ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ವಾಹನವೊಂದು ಟ್ರ್ಯಾಕ್ಟರ್​ಗೆ ಗುದ್ದಿದೆ. ಈ ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಪಟಿಯಾಲ ಜಿಲ್ಲೆಯ ಸಫೇರಾ ಗ್ರಾಮದ ಗುರ್​ಪ್ರೀತ್ ಸಿಂಗ್ (24) ಹಾಗೂ ಲಾಭ್ ಸಿಂಗ್ (65) ಎಂದು ಗುರುತಿಸಲಾಗಿದೆ. ಗುರ್​ಪ್ರೀತ್ ಸಿಂಗ್ ಸ್ಥಳದಲ್ಲೇ ಮೃತಪಟ್ಟರೆ, ಲಾಭ್ ಸಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ.
ಇದೇ ಗ್ರಾಮದ ಇನ್ನಿತರ ಮೂವರು ರೈತರಿಗೆ ಗಂಭೀರ ಗಾಯಗಳಾಗಿದ್ದು, ಇನ್ನೂ ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿರುವುದಾಗಿ ವರದಿಯಾಗಿದೆ.
ಗುರ್​ಪ್ರೀತ್​ ಅವರು ಕುಟುಂಬಕ್ಕೆ ಒಬ್ಬನೇ ಮಗನಾಗಿದ್ದು ಅವರೇ ಕುಟುಂಬಕ್ಕೆ ಆಧಾರವಾಗಿದ್ದರು ಎಂದು ಅಪಘಾತದಲ್ಲಿ ಗಾಯಗೊಂಡಿರುವ ರೈತ ನರೇಂದ್ರ ಸಿಂಗ್ ಹೇಳಿದ್ದಾರೆ. ಗಾಯಗೊಂಡಿರುವ ರೈತರಿಂದ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ಅಪಘಾತ ಮಾಡಿದ ವಾಹನ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟ್ವಿಟರ್​ ಬಳಸಿ 9 ಕೊಲೆ ಮಾಡಿದ್ದ ಈತ! ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್​; ಟ್ವಿಟರ್​ ಕಿಲ್ಲರ್​ನ ವಿಚಿತ್ರ ಕಥೆ ಇಲ್ಲಿದೆ…

ಮುಕೇಶ್​ ಅಂಬಾನಿ ಮೊಮ್ಮಗು ನೋಡಲು ಮೋದಿ ಹೋಗಿದ್ರಾ- ವೈರಲ್​ ಫೋಟೋದ ಸತ್ಯಾಂಶ ಏನು?

ಮಕ್ಕಳು ಮದುವೆಗೆ ಒಪ್ಪದಿದ್ದರೆ ಅದರ ಹಿಂದಿರುವ ಕಾರಣಗಳು ಇದೂ ಇರಬಹುದಲ್ಲವೆ?

ಮತಾಂತರ ಆಗಿಹೋಗಿದೆ, ಮೂರು ತಿಂಗಳ ಗರ್ಭಿಣಿ: ಗಂಡನನ್ನು ಬಿಟ್ಟುಬಿಡಿ ಎಂದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
