ಗಾಜಿಯಾಬಾದ್ ​(ಉತ್ತರ ಪ್ರದೇಶ):ಬಹು ವಿವಾದಕ್ಕೆ ಸಿಲುಕಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ ಬೆನ್ನಲ್ಲೇ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಹೊಸ ವರಸೆ ಶುರು ಮಾಡಿದ್ದಾರೆ.
ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶಾಶ್ವತಗೊಳಿಸಲು ಅದಕ್ಕೆ ಶಾಸನೀಯ ಮಾನ್ಯತೆಯನ್ನು ನೀಡಬೇಕೆಂದು ಒತ್ತಾಯಿಸಿ ಇದೇ 29ರಂದು 60 ಟ್ರ್ಯಾಕ್ಟರ್​ಗಳ ಮೆರವಣಿಗೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. 29ರಿಂದ ಸಂಸತ್​ನ ಚಳಿಗಾಲದ ಅಧಿವೇಶನ ನಡೆಯಲಿದೆ. ಆ ಸಮಯದಲ್ಲಿ ನಾವು ಪ್ರತಿಭಟನೆ ಮಾಡುತ್ತೇವೆ. ಜತೆಗೆ ಟ್ರ್ಯಾಕ್ಟರ್​ಗಳ ಮೆರವಣಿಗೆಯನ್ನೂ ಮಾಡಲಾಗುತ್ತದೆ. ಈಗಾಗಲೇ ಸ್ವಲ್ಪ ಮಟ್ಟದ ಜಯ ಸಿಕ್ಕಿದೆ. ಅಂದು (ನವೆಂಬರ್ 26ರಂದು) ಭಾಗಶಃ ವಿಜಯದ ದಿನವನ್ನು ಆಚರಣೆ ಮಾಡಲಾಗುತ್ತದೆ. ಉಳಿದ ಬೇಡಿಕೆಗಳನ್ನೂ ಸರ್ಕಾರದ ಮುಂದೆ ಇರಿಸಲಾಗುತ್ತದೆ ಎಂದಿದ್ದಾರೆ.
ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಮಾತನಾಡಿರುವ ಅವರು, ರಸ್ತೆಗಳಲ್ಲಿ ಪ್ರತಿಭಟನೆ ಮಾಡುವುದಿಲ್ಲ. ಪ್ರತಿಭಟನೆ ಮಾಡುತ್ತಿರುವ ಸ್ಥಳಗಳನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಆ ತೆರವಾಗಿರುವ ಮಾರ್ಗದ ಮೂಲಕವೇ ದೆಹಲಿಗೆ ಸಾಗಿ ಸಂಸತ್ತಿನವರೆಗೆ ಟ್ರ್ಯಾಕ್ಟರ್‌ ಮೆರವಣಿಗೆ ಮಾಡಲಿದ್ದೇವೆ ಎಂದಿದ್ದಾರೆ.
ಕನಿಷ್ಠ ಬೆಂಬಲ ಬೆಲೆಗೆ ಶಾಸನೀಯ ಮಾನ್ಯತೆ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ಯಾವ ಪ್ರತಿಕ್ರಿಯೆ ನೀಡುತ್ತದೆ ಎಂಬುದನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಕಳೆದ ಬಾರಿ 200 ರೈತರಷ್ಟೇ ಸಂಸತ್ತಿಗೆ ತೆರಳಿದ್ದೆವು. ಆದರೆ ಈ ಬಾರಿ ಸಾವಿರಾರು ರೈತರು ಹೋಗಲಿದ್ದೇವೆ. ಎಂಎಸ್‌ಪಿ ಅಷ್ಟೇ ಅಲ್ಲದೇ ಕಳೆದ ವರ್ಷ ಮೃತಪಟ್ಟ 750 ಮಂದಿ ರೈತರ ಸಾವಿಗೆ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಟಿಕಾಯತ್ ಆಗ್ರಹಿಸಿದ್ದಾರೆ.
ಬೆಂಗಳೂರಿನಿಂದ ಸಹಸ್ರಕೋಟ್ಯಧೀಶ್ವರ ‘ಕೆಜಿಎಫ್‌ ಬಾಬು’ ಕಣಕ್ಕೆ- ಇವರ ಆಸ್ತಿಯ ಮೊತ್ತಕ್ಕೆ ಎಂಟಿಬಿ, ಡಿಕೆಶಿಯೂ ಸುಸ್ತು!

ಕಾಂಗ್ರೆಸ್‌ಗೆ ಸೇರಪ್ಪಾ ಎಂದು ಪುನೀತ್‌ಗೆ ನಾನು ಬೇಕಾದಷ್ಟು ಗಾಳ ಹಾಕಿದ್ದೆ, ಪ್ರಯೋಜನ ಆಗಲಿಲ್ಲ ಎಂದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − twelve =
Remember me
