ವಾಷಿಂಗ್ಟನ್ :ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಇಬ್ಬರೂ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಬೆನ್ನಲ್ಲೇ ಇದೀಗ ಅವರ ಮಗನಿಗೂ ಸೋಂಕು ತಗುಲಿತ್ತು ಎನ್ನುವುದನ್ನು ಬಹಿರಂಗಪಡಿಸಲಾಗಿದೆ.
ಈ ಮೊದಲೇ ಸೋಂಕು ತಗುಲಿದ್ದರೂ ಈ ವಿಷಯವನ್ನು ಬಹಿರಂಗಗೊಳಿಸದಿದ್ದ ಟ್ರಂಪ್​ ದಂಪತಿ ಇದೀಗ ಮಗ ಸಂಪೂರ್ಣ ಗುಣಮುಖರಾದ ಮೇಲೆ ಮಾಹಿತಿ ನೀಡಿದ್ದಾರೆ.
ಮೊದಲು ನಮಗಿಬ್ಬರಿಗೂ ಸೋಂಕು ದೃಢಪಟ್ಟಿದ್ದಾಗ ಮಗನನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಆಗ ನೆಗೆಟಿವ್​ ಬಂದಿತ್ತು. ಕೆಲ ದಿನ ಬಿಟ್ಟು ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿತ್ತು. 14 ವರ್ಷದ ಬ್ಯಾರನ್​ನಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ, ಆದರೆ ಫಲಿತಾಂಶ ಮಾತ್ರ ಪಾಸಿಟಿವ್​ ಬಂದಿತ್ತು ಎಂದು ಶ್ವೇತಭವನದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಬ್ಲಾಗ್‌ನಲ್ಲಿ ತಾಯಿ ಮೆಲಾನಿಯಾ ವಿವರಿಸಿದ್ದಾರೆ.
ಇದನ್ನೂ ಓದಿ:ಬಾಲಕಿ ಮೇಲೆ ಗ್ಯಾಂಗ್​ರೇಪ್​, ಕೊಲೆ- ಕಾಮುಕರಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್​
ಅದೃಷ್ಟವಶಾತ್ ನಮ್ಮ 14 ವರ್ಷದ ಪುತ್ರ ಆರೋಗ್ಯವಂತನಿದ್ದಾನೆ. ಅವನಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿಯಿದೆ. ಆದ್ದರಿಂದ ಬೇಗ ಚೇತರಿಸಿಕೊಂಡ. ಈಗ ಸಂಪೂರ್ಣ ಗುಣಮುಖನಾಗಿದ್ದಾನೆ ಎಂದು ಅವರು ಹೇಳಿದ್ದಾರೆ.
ಒಂದು ರೀತಿಯಲ್ಲಿ ನಾವು ಮೂವರು ಒಂದೇ ಸಮಯದಲ್ಲಿ ಸೋಂಕಿಗೆ ತುತ್ತಾಗಿದ್ದರಿಂದ ಸಂತೋಷಪಟ್ಟಿದ್ದೇವೆ. ನಾವು ಒಬ್ಬರಿಗೊಬ್ಬರು ಪರಸ್ಪರ ಎಷ್ಟು ಕಾಳಜಿ ವಹಿಸುತ್ತಿದ್ದೇವೆ ಎನ್ನುವುದು ಇದರಿಂದ ತಿಳಿದುಬರುತ್ತದೆ. ಅದೇ ಕಾಳಜಿಯಿಂದಾಗಿ ಇದೀಗ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ ಮೆಲಾನಿಯಾ.
ಹಸುಗಳೊಂದಿಗೆ ಈತ ಮಾಡುತ್ತಿದ್ದುದನ್ನು ನೋಡಿ ಬೆಚ್ಚಿಬಿದ್ದ ಪೊಲೀಸರು- ಸಿಸಿಟಿವಿಯಲ್ಲಿ ಸೆರೆ; ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
