ಮುಂಬೈ:ಮಹಾರಾಷ್ಟ್ರದಲ್ಲಿ ಈಗ ಊರ ಹೆಸರುಗಳ ಮರುನಾಮಕರಣ ಪ್ರಕ್ರಿಯೆ ಶುರುವಾಗಿದೆ. ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ಊರುಗಳ ಹೆಸರುಗಳನ್ನು ಮರುನಾಮಕಣ ಮಾಡಲು ನಿರ್ಧರಿಸಲಾಗಿದ್ದು, ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಇದು ಗುರಿಯಾಗಿದೆ.
ಔರಂಗಾಬಾದ್​​ಗೆ ಛತ್ರಪತಿ ಸಂಭಾಜಿನಗರವೆಂದೂ, ಉಸ್ಮಾನಾಬಾದ್​​ಗೆ ಧಾರಾಶಿವ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದಿದ್ದಾರೆ ಶಿಂಧೆ.
ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಈ ಆದೇಶ ಹೊರಡಿಸಿತ್ತು ಎಂದು ಶಿಂಧೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಮೊಘಲರ ಆಡಳಿತದಲ್ಲಿ ಔರಂಗಜೇಬ್, ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಔರಂಗಾಬಾದ್ ನಗರ ಸ್ಥಾಪನೆ ಮಾಡಿದ್ದರು. ಈ ನಗರವನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಲು ಬಾಳಾಸಾಹೇಬ್ ಠಾಕ್ರೆ ಸೂಚಿಸಿದ್ದರು. ಅವರ ಈ ಸೂಚನೆ ಮೇರೆಗೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಔರಂಗಾಬಾದ್​ಗೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದ್ದರು. ಅದನ್ನು ಈಗ ಜಾರಿಗೆ ತರಲಾಗಿದೆ ಎಂದು ಸಿಎಂ ಶಿಂಧೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದರು.
ಮಹಾವಿಕಾಸ್ ಅಘಾಡಿ ಸಮಯದಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಇದೀಗ ಮತ್ತೊಮ್ಮೆ ಮರುಪರಿಶೀಲನೆ ಮಾಡಿದ್ದು ಸರಿಯಲ್ಲ ಎಂದು ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Shiv Sena (Thackeray faction) protest in Aurangabad against Maharashtra govt's decision to review renaming of Aurangabad & Osmanabad by MVA govt
State Govt today announced renaming of Aurangabad as Chhatrapati Sambhajinagar&Osmanabad as Dharashiv, said, earlier decision illegalpic.twitter.com/bMpPTaIN2z
— ANI (@ANI)July 16, 2022

ಇಬ್ಬರು ಹೆಂಡಿರ ಗೌರಿಬಿದನೂರು ಗಂಡ! ವಿವಾಹಿತೆಗೂ ಮೋಸ ಮಾಡಿ ಮತ್ತೊಂದು ಮದ್ವೆ: ಪತಿಗಾಗಿ ಇಬ್ಬರ ಜಗಳ

ಸ್ವಂತ ಇಂಟರ್​ನೆಟ್​ ಹೊಂದುವ ಮೂಲಕ ದಾಖಲೆ ಬರೆದ ಕೇರಳ: ಮುಖ್ಯಮಂತ್ರಿ ಘೋಷಣೆ

ಮಧ್ಯರಾತ್ರಿ ಮಾಡಿದ ತಪ್ಪನ್ನು ಬೆಳಗಾದ ಮೇಲೆ ತಿದ್ದಿಕೊಂಡ ಸರ್ಕಾರ: ವಾಪಸ್ ಪಡೆದ ಆದೇಶಕ್ಕೆ ಮತ್ತೊಮ್ಮೆ ತಿದ್ದುಪಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − six =
Remember me
