ಉದಯಪುರ (ರಾಜಸ್ಥಾನ):ಬಿಜೆಪಿ ಮುಖಂಡೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ಕಾರಣಕ್ಕೆ ರಾಜಸ್ಥಾನದ ಉದಯಪುರದ ಟೈಲರ್​ ಕನ್ಹಯ್ಯಲಾಲ್​ ಅವರನ್ನು ಭೀಕರವಾಗಿ ಕೊಲೆ ಮಾಡಿರುವ ಪಾತಕಿಗಳಿಗೆ ಪಾಕಿಸ್ತಾನದ ಲಿಂಕ್​ ಇದೆ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.
ಟೈಲರ್​ ಭೀಕರ ಕೊಲೆ ಮಾಡಿ, ಅದರ ವಿಡಿಯೋ ಮಾಡಿದ್ದ ಆರೋಪಿಗಳಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಅಹ್ಮದ್ ಅವರನ್ನು ಮಂಗಳವಾರ ರಾತ್ರಿ ರಾಜ್‍ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಈ ಇಬ್ಬರೂ ಆರೋಪಿಗಳು ಪಾಕಿಸ್ತಾನ ಮೂಲದ ತೀವ್ರ ಮುಸ್ಲಿಂ ಮೂಲಭೂತವಾದಿ ಸಂಘಟನೆಯಾದ ದಾವತ್-ಎ-ಇಸ್ಲಾಮಿಯೊಂದಿಗೆ ಸಂಬಂಧ ಹೊಂದಿರುವುದಾಗಿ ತಿಳಿದುಬಂದಿದೆ. ಗೌಸ್ ಮೊಹಮ್ಮದ್ ಎಂಟು ಬೇರೆಬೇರೆ ಮೊಬೈಲ್​ಗಳ ಮೂಲಕ ಪಾಕಿಸ್ತಾನದ ಜತೆ ಸಂಪರ್ಕ ಹೊಂದಿರುವುದು ತಿಳಿದುಬಂದಿದೆ.
ಸದ್ಯ ಈ ಪ್ರಕರಣದ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಲಾಗಿದೆ. ಈ ಘಟನೆಯ ಹಿಂದೆ ಇನ್ನಾವ ಭಯೋತ್ಪಾದಕರ ನಂಟು ಇದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆರೋಪಿಗಳು ಭಯೋತ್ಪಾದಕರ ಗುಂಪಿನೊಂದಿಗೆ ಸಂಪರ್ಕದಲ್ಲಿರಬಹುದು. ಇದನ್ನು ಖಚಿತಪಡಿಸಿಕೊಳ್ಳಲು, ರಾಷ್ಟ್ರೀಯ ತನಿಖಾ ಸಂಸ್ಥೆ ತಂಡವು ಉದಯಪುರದಲ್ಲಿ ತನಿಖೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.
उदयपुर की घटना में शामिल आरोपियों की त्वरित गिरफ्तारी करने वाले पांच पुलिसकर्मियों श्री तेजपाल, श्री नरेन्द्र, श्री शौकत, श्री विकास एवं श्री गौतम को आउट ऑफ टर्म प्रमोशन देने का फैसला किया है।
— Ashok Gehlot (@ashokgehlot51)June 29, 2022

ಇದರ ಬೆನ್ನಲ್ಲೇ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರಿಗೆ ಬಡ್ತಿ ನೀಡಲು ರಾಜ್ಯಸ್ಥಾನ ಸರ್ಕಾರ ನಿರ್ಧರಿಸಿದೆ. ಜೀವದ ಹಂಗುತೊರೆದು ಈ ಇಬ್ಬರು ಪಾತಕಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತೇಜ್‌ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್ ಎಂಬ ಐವರು ಪೊಲೀಸರಿಗೆ ಬಡ್ತಿ ನೀಡಲಾಗುವುದು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್​ ಮಾಡಿದ್ದಾರೆ.
ಅಪ್ಪನನ್ನು ಪೊಲೀಸ್ರು ಬಂಧಿಸಿದ್ರು, ಬೆದರಿಕೆ ಕಂಪ್ಲೇಂಟ್​ ಕೊಟ್ರೂ ಕೇರೇ ಮಾಡ್ಲಿಲ್ಲ: ಟೈಲರ್​ ಕನ್ಹಯ್ಯ ಮಕ್ಕಳಿಂದ ಶಾಕಿಂಗ್​ ಹೇಳಿಕೆ

ನನ್ನ ಪತಿಯ ಶಿರಚ್ಛೇದ ಮಾಡಿದವರಿಗೆ ಗಲ್ಲು ವಿಧಿಸಿ: ಅಂತ್ಯಕ್ರಿಯೆಯಲ್ಲಿ ಬಿಕ್ಕಿಬಿಕ್ಕಿ ಅತ್ತ ಕನ್ಹಯ್ಯಾ ಪತ್ನಿ

ಶಿರಚ್ಛೇದನ ಮಾಡಿದವರಿಗೆ ಐಸಿಸ್​ ನಂಟು? ಮೃತ ಟೈಲರ್​ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 10 =
Remember me
