ಚಿಕ್ಕಮಗಳೂರು ಜಿಲ್ಲೆಯಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 7 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಕಾರ್ಯಕರ್ತೆಯರ ಹುದ್ದೆಗಳು: 13ಸಹಾಯಕಿಯರ ಹುದ್ದೆಗಳು: 68ಒಟ್ಟು : 81
ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ.
ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ಎಲ್ಲಿವೆ ಹುದ್ದೆಗಳು?:ಚಿಕ್ಕಮಗಳೂರು, ಕಡೂರು, ತರಿಕೆರೆ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳಲ್ಲಿ ಹುದ್ದೆಗಳು ಖಾಲಿ ಇವೆ.
ಈ ಮೀಸಲಾತಿಯೂ ಅನ್ವಯಿಸುತ್ತದೆ:ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್‍ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.
ವಿದ್ಯಾರ್ಹತೆ:ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ.
ವಯೋಮಿತಿ:18 ರಿಂದ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ:ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.
ಗೌರವಧನಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000ರೂ, ಮಿನಿ ಅಂಗನವಾಡಿ ಕಾರ್ಯಕರ್ತೆಗೆ 5,750 ರೂ., ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 5.02.2021ಅಧಿಸೂಚನೆಗೆ:https://bit.ly/38pp4eiಮಾಹಿತಿಗೆ:https://anganwadirecruit.kar.nic.in
VIDEO: ಯುವಕರೇ ಹುಷಾರ್​! ಈಗಲೇ ಡಾನ್ಸ್​ ಕಲಿತುಬಿಡಿ- ಇಲ್ಲದಿದ್ದರೆ ಕಾದಿದೆ ಅಪಾಯ

ಸಾಲು ಸಾಲು ಪುರುಷರ ಬೆನ್ನಲ್ಲೇ ದೀದಿಗೆ ಶುರುವಾಯ್ತು ಮಹಿಳೆಯರ ಟೆನ್ಷನ್​- ಬೆನ್ನು ತಿರುವಿದ ಸಂಸದೆ​!

ಎಲ್ಲರೂ ಒಳ್ಳೆಯವರು, ಆದರೆ ನನಗೇ ಸೊಕ್ಕು ಜಾಸ್ತಿ ಅನಿಸತ್ತೆ…

ಸಾರ್ವಜನಿಕ ಸಂಪರ್ಕ ಕ್ಷೇತ್ರದ ವಿವಿಧ ಮಜಲುಗಳನ್ನು ತೆರೆದಿಡುವ ಜಯಪ್ರಕಾಶ ಪುತ್ತೂರು ಅವರ ‘ಹಮಾರಾ ಪಿಆರ್​ಓ’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 14 =
Remember me
