ಮೈಸೂರು:ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 9 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ, 22 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 107 ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಾರ್ಯಕರ್ತೆಯರ ಒಟ್ಟು ಹುದ್ದೆಗಳು: 53 ಹಾಗೂ ಸಹಾಯಕಿಯರ ಒಟ್ಟು ಹುದ್ದೆಗಳು: 107 ಇವೆ.
ಟಿ.ನರಸೀಪುರ, ಹುಣಸೂರು, ಎಚ್.ಡಿ. ಕೋಟೆ, ಮೈಸೂರು ನಗರ, ನಂಜನಗೂಡು, ಬಿಳಿಗೆರೆ (ನಂಜನಗೂಡು), ಪಿರಿಯಾಪಟ್ಟಣ, ಕೆ.ಆರ್.ನಗರ, ಮೈಸೂರು ಗ್ರಾಮಾಂತರ ತಾಲೂಕು ವ್ಯಾಪ್ತಿಯಲ್ಲಿರುವ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ.
ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ಈ ಮೀಸಲಾತಿಯೂ ಅನ್ವಯಿಸುತ್ತದೆ:ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್‍ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.
ವಿದ್ಯಾರ್ಹತೆ:ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ.
ವಯೋಮಿತಿ:18 ರಿಂದ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ:ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.
ಗೌರವಧನ ಆಧಾರಿತ ಹುದ್ದೆ:ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000ರೂ, ಮಿನಿ ಅಂಗನವಾಡಿ ಕಾರ್ಯಕರ್ತೆಗೆ 5,750 ರೂ., ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 24.12.2020ಅಧಿಸೂಚನೆಗೆ ಇಲ್ಲಿ ಕ್ಲಿಕ್ಕಿಸಿ:https://bit.ly/33Y4E9sಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ:https://anganwadirecruit.kar.nic.in
ಇಂಡಿಯನ್ ಆಯಿಲ್ ಕಾರ್ಪೋರೇಷನ್​ನಲ್ಲಿ 436 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
