ಕೇಂದ್ರ ಸರ್ಕಾರದ ಅಧೀನದಲ್ಲಿಕಾರ್ಯ ನಿರ್ವಹಿಸುವ ಸೆಂಟ್ರಲ್ ಪವರ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿಪಿಆರ್‍ಐ) ಬೆಂಗಳೂರು ಸೇರಿ ಇತರ 7 ರಾಜ್ಯಗಳಲ್ಲಿ ಪ್ರಧಾನ ಕಚೇರಿ ಹೊಂದಿದೆ. ಪ್ರಸ್ತುತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು: 25
ಸಿಪಿಆರ್‍ಐನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 2 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ, ಸಂಸ್ಥೆಯ ಅವಶ್ಯಕತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಯಾವ ನಗರಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ.
ಹುದ್ದೆ ವಿವರ* ಇಂಜಿನಿಯರಿಂಗ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್-5, ಸಿವಿಲ್-1) – 6* ಟೆಕ್ನಿಷಿಯನ್ ಗ್ರೇಡ್ 2 – 7* ಅಸಿಸ್ಟೆಂಟ್ ಗ್ರೇಡ್ 2 – 5* ಸ್ಟೆನೋಗ್ರಾಫರ್ ಗ್ರೇಡ್ 3 – 3* ಎಂಟಿಎಸ್ ಗ್ರೇಡ್ 1 (ವಾಚ್‍ಮನ್) – 4
ಮೀಸಲಾತಿ: ಸಿಪಿಆರ್‍ಐನಲ್ಲಿರುವ 25 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 17 ಸ್ಥಾನ, ಎಸ್ಸಿಗೆ 1, ಎಸ್ಟಿಗೆ 1, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 4, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 2 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ ವಾಚ್‍ಮನ್ ಹುದ್ದೆಗಳನ್ನು ಮಾಜಿ ಸೈನಿಕರಿಗೆ ಮೀಸಲಿರಿಸಲಾಗಿದೆ. ಅಲ್ಲದೇ ಅಂಗವಿಕಲ ಅಭ್ಯರ್ಥಿಗಳಿಗೂ ಮೀಸಲಾತಿಯಲ್ಲಿ ಸ್ಥಾನ ನೀಡಲಾಗಿದೆ.
ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ ಉತ್ತೀರ್ಣ, ಎಲೆಕ್ಟ್ರಿಕಲ್/ ಸಿವಿಲ್ ಇಂಜಿನಿಯರಿಂಗ್‍ನಲ್ಲಿ 3 ವರ್ಷದ ಡಿಪ್ಲೋಮಾ, ಎಲೆಕ್ಟ್ರಿಷಿಯನ್ ಟ್ರೇಡ್‍ನಲ್ಲಿ 2 ವರ್ಷದ ಐಟಿಐ, ಕಾಮರ್ಸ್/ ಬಿಜಿನೆಸ್ ಅಡ್ಮಿನಿಸ್ಟ್ರೇಷನ್/ ಬಿಜಿನೆಸ್ ಮ್ಯಾನೇಜ್‍ಮೆಂಟ್‍ನಲ್ಲಿ ಪದವಿ, ಆರ್ಟ್ಸ್​/ ಕಾಮರ್ಸ್/ ಸೈನ್ಸ್ ಪದವಿ,
ವಯೋಮಿತಿ: 5.4.2021ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 30, 35, 45 ವರ್ಷ. ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇದೆ.
ವೇತನ: ಇಂಜಿನಿಯರಿಂಗ್ ಅಸಿಸ್ಟೆಂಟ್‍ಗೆ ಮಾಸಿಕ 35,400-1,12,400 ರೂ., ಟೆಕ್ನಿಷಿಯನ್ ಗ್ರೇಡ್ 2ಗೆ ಮಾಸಿಕ 21,700 – 69,100 ರೂ., ಎಂಟಿಎಸ್ ಗ್ರೇಡ್ 1ಗೆ ಮಾಸಿಕ 18,000-56,900 ರೂ. ಹಾಗೂ ಉಳಿದ ಹುದ್ದೆಗಳಿಗೆ ಮಾಸಿಕ 25,500-81,100 ರೂ. ವೇತನ ಇದೆ.
ಆಯ್ಕೆ ಪ್ರಕ್ರಿಯೆ: ಹುದ್ದೆಗಳಿಗೆ ಅನುಗುಣವಾಗಿ ಬಹು ಆಯ್ಕೆ ಮಾದರಿ ಪರೀಕ್ಷೆ, ಕೌಶಲ ಪರೀಕ್ಷೆ, ಸ್ಟೆನೋಗ್ರಾಫರ್ ಪರೀಕ್ಷೆ, ಟ್ರೇಡ್ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 5.4.2021ಅಧಿಸೂಚನೆಗೆ:https://bit.ly/3rWtOiEಮಾಹಿತಿಗೆ:http://www.cpri.in
ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಆರೋಗ್ಯ ಕೇಂದ್ರದಲ್ಲಿ ಉದ್ಯೋಗ: ಎಸ್​ಎಸ್​ಎಲ್​ಸಿಯಿಂದ ಎಂಬಿಬಿಎಸ್​ವರೆಗೆ ಅವಕಾಶ, ₹1 ಲಕ್ಷದವರೆಗೂ ಸಂಬಳ

ಎಲೆಕ್ಟ್ರಿಕಲ್​, ಎಲೆಕ್ಟ್ರಾನಿಕ್ಸ್​ ಆಗಿದೆಯೆ? ಮೆಟ್ರೋ ರೈಲ್​ ಕಾರ್ಪೋರೇಷನ್​ನಲ್ಲಿ ಭರಪೂರ ಉದ್ಯೋಗ

ಕೃಷಿ ಸಂಬಂಧಿತ ಪದವೀಧರರಿಗೆ ಇಲ್ಲಿದೆ ಅವಕಾಶ: ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + five =
Remember me
