ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ಲಿಮಿಟೆಡ್‍ನಲ್ಲಿನ (ಬಿಇಎಲ್) ಮಿಲಿಟರಿ ಕಮ್ಯುನಿಕೇಷನ್ ಎಸ್‍ಬಿಯು ಕಾಂಪ್ಲೆಕ್ಸ್‍ನಲ್ಲಿ ಉದ್ಯೋಗಾವಕಾಶವಿದ್ದು, ಸಂದರ್ಶನ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.ಒಟ್ಟು 16 ಹುದ್ದೆಗಳಿದ್ದು, ಒಂದು ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಅಭ್ಯರ್ಥಿಯ ವೈಯಕ್ತಿಕ ಕಾರ್ಯಕ್ಷಮತೆ, ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ ಗರಿಷ್ಠ 3 ವರ್ಷ ಅವಧಿ ವಿಸ್ತರಿಸಲಾಗುವುದು.
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಬಿಇಎಲ್‍ನಿಂದ ನೇಮಕ ಮಾಡಿಕೊಳ್ಳುವ ಅಭ್ಯರ್ಥಿಗಳನ್ನು ಆರಕೋಣಂ, ವಿಶಾಖಪಟ್ಟಣ, ಕೊಚ್ಚಿ, ಗೋವಾ, ಮುಂಬೈನಲ್ಲಿ ನೇಮಕ ಮಾಡಲಾಗುವುದು, ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಸಾಮಾನ್ಯವರ್ಗಕ್ಕೆ 6 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 5, ಎಸ್‍ಸಿ -3, ಎಸ್‍ಟಿಗೆ 1, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 1 ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಹುದ್ದೆಗಳ ಮಾಹಿತಿ* ಟ್ರೈನಿ ಇಂಜಿನಿಯರ್ ಐ ಸಿವಿಲ್ – 10* ಪ್ರಾಜೆಕ್ಟ್ ಇಂಜಿನಿಯರ್ ಐ ಎಲೆಕ್ಟ್ರಿಕಲ್ – 6
ಶೈಕ್ಷಣಿಕ ಅರ್ಹತೆ:ಸಿವಿಲ್ ಮತ್ತು ಎಲೆಕ್ಟ್ರಿಕಲ್‍ನಲ್ಲಿ ಬಿಇ, ಬಿ.ಟೆಕ್ ಪದವಿ ಪಡೆದಿರಬೇಕು. ಸಾಮಾನ್ಯ ವರ್ಗ, ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಉಳಿದ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು. ವೃತ್ತಿ ಅನುಭವ ಅವಶ್ಯ.
ವಯೋಮಿತಿ:1.1.2021ಕ್ಕೆ ಅನ್ವಯವಾಗುವಂತೆ ಗರಿಷ್ಠ 25 ವರ್ಷ. ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ 3 ರಿಂದ 10 ವರ್ಷ ವಯೋ ಸಡಿಲಿಕೆ ಇದೆ.
ವೇತನ:ಮೊದಲ ವರ್ಷ ಮಾಸಿಕ 25,000 ರೂ. 2ನೇ ವರ್ಷ ಮಾಸಿಕ 28,000, 3ನೇ ವರ್ಷ 31,000 ರೂ. ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ವೃತ್ತಿ ಅನುಭವ ಆಧರಿಸಿ ಸಿದ್ಧಪಡಿಸಲಾದ ಆಯ್ದಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ದಿನಾಂಕ ಹಾಗೂ ವಿವರಗಳನ್ನು ಆಯ್ಕೆಯಾದ ಅಭ್ಯರ್ಥಿಗಳ ಮೇಲ್‍ಗೆ ಕಳುಹಿಸಲಾಗುವುದು.
ಅರ್ಜಿ ಶುಲ್ಕ:ಎಸ್‍ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 200 ರೂ. ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 16.2.2021ಅಧಿಸೂಚನೆಗೆ:https://bit.ly/3riiA7yಮಾಹಿತಿಗೆ:https://www.bel-india.in
ಹೆಚ್ಚಿನ ಉದ್ಯೋಗ ಸುದ್ದಿಗೆ
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಲೈಬ್ರರಿ ಸೈನ್ಸ್​ನಲ್ಲಿ ಪಿ.ಜಿ ಆಗಿದೆಯಾ? ಹಾಗಿದ್ದರೆ ಬೆಂಗಳೂರು ವಿವಿಯಲ್ಲಿದೆ ಅವಕಾಶ

ರಿಸರ್ವ್​ ಬ್ಯಾಂಕ್​ನಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ 322 ಹುದ್ದೆಗೆ ಅರ್ಜಿ ಆಹ್ವಾನ

ಪದವೀಧರರಿಗೆ ಇಲ್ಲಿದೆ ಭರ್ಜರಿ ಅವಕಾಶ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಲ್ಲಿವೆ 100 ಹುದ್ದೆಗಳು

ಇಂಜಿನಿಯರಿಂಗ್ ಪದವೀಧರರಾ? ಇಲ್ಲಿದೆ ನಿಮಗೆ ಉತ್ತಮ ಉದ್ಯೋಗಾವಕಾಶ

ನೋಟು ಮುದ್ರಣ ಕೇಂದ್ರದಲ್ಲಿ ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 3 =
Remember me
