ಕೊಂಕಣ್ ರೈಲ್ವೆಕಾರ್ಪೋರೇಷನ್ ಲಿಮಿಟೆಡ್‍ನಲ್ಲಿ (ಕೆಆರ್‍ಸಿಎಲ್) ಖಾಲಿ ಇರುವ 18 ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು ಹುದ್ದೆಗಳು: 18
ಜಮ್ಮು ಕಾಶ್ಮೀರದಲ್ಲಿ ಪ್ರಾರಂಭಿಸುತ್ತಿರುವ ಉದಮ್‍ಪುರ್- ಶ್ರೀನಗರ್- ಬಾರಾಮುಲ್ಲ- ರೈಲ್ ಲಿಂಕ್ (ಯುಎಸ್‍ಬಿಆರ್‍ಎಲ್) ಯೋಜನೆಯನ್ನು ಕೊಂಕಣ ರೈಲ್ವೆ ನಿರ್ವಹಿಸುತ್ತಿದೆ. ಇದಕ್ಕಾಗಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಜಮ್ಮು- ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು. ಆರಂಭದಲ್ಲಿ 2 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು. ನಂತರ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧರಿಸಿ ಅವಧಿ ವಿಸ್ತರಿಸಲಾಗುವುದು.
ಶೈಕ್ಷಣಿಕ ಅರ್ಹತೆ:ಎಐಸಿಟಿಇಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯುನಿಕೇಷನ್/ ಕಮ್ಯುನಿಕೇಷನ್/ ಇನ್‍ಸ್ಟ್ರುಮೆಂಟೇಷನ್‍ನಲ್ಲಿ ಬಿಇ/ ಬಿ.ಟೆಕ್ ಪದವಿ ಪಡೆದಿದ್ದು, ಪದವಿಯಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು.
ವಯೋಮಿತಿ:1.2.2021ಕ್ಕೆ ಅನ್ವಯವಾಗುವಂತೆ ಗರಿಷ್ಠ 25 ವರ್ಷ. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಸಡಿಲಿಕೆ ಇದೆ.
ವೇತನ:ಮೊದಲ ವರ್ಷ ಮಾಸಿಕ 30,000 ರೂ. ಇದ್ದು, 2ನೇ ವರ್ಷಕ್ಕೆ ಶೇ.10 ವೇತನ ಹೆಚ್ಚಳವಾಗಲಿದೆ.
ಸೂಚನೆ:ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಧಿಸೂಚನೆ ಜತೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತರಬೇಕು. ಅಲ್ಲದೇ ಶೈಕ್ಷಣಿಕ, ವಯಸ್ಸು, ಜಾತಿ ಪ್ರಮಾಣಪತ್ರ ಸೇರಿ ಎಲ್ಲ ದಾಖಲೆಗಳ ಮೂಲ ಪ್ರತಿಯನ್ನು ತರಬೇಕು. ಹಾಗೂ ಅರ್ಜಿ ಜತೆ ದಾಖಲೆಗಳ ಪ್ರತಿಯನ್ನು ಸೇರಿಸಿರಬೇಕು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು 2-3 ದಿನ ಅಲ್ಲೇ ಉಳಿಯಲು ವ್ಯವಸ್ಥೆ ಮಾಡಿಕೊಂಡು ಬರುವುದರ ಜತೆಗೆ ಕರೊನಾ ಮುನ್ನೆಚ್ಚರಿಕಾ ನಿಯಮವನ್ನು ಪಾಲಿಸಲು ಸೂಚಿಸಲಾಗಿದೆ.
ಸಂದರ್ಶನಕ್ಕೆ ನಡೆಯುವ ದಿನಾಂಕ: ಏ. 20 ರಿಂದ 23ರ ವರೆಗೆ. ಬೆಳಗ್ಗೆ 9 ರಿಂದ 3 ಗಂಟೆ ವರೆಗೆ.ಸಂದರ್ಶನ ನಡೆಯುವ ಸ್ಥಳ:http://USBRL Project Head Office, Konkan Railway Corporation Ltd., Satyam Complex, Marble Market, Extension- Trikuta Nagar, Jammu, Jammu & Kashmir. Pin 180011
ಅಧಿಸೂಚನೆಗೆ:https://bit.ly/38Jvg0Cಮಾಹಿತಿಗೆ:http://www.konkanrailway.com
ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಆರೋಗ್ಯ ಕೇಂದ್ರದಲ್ಲಿ ಉದ್ಯೋಗ: ಎಸ್​ಎಸ್​ಎಲ್​ಸಿಯಿಂದ ಎಂಬಿಬಿಎಸ್​ವರೆಗೆ ಅವಕಾಶ, ₹1 ಲಕ್ಷದವರೆಗೂ ಸಂಬಳ

ಎಲೆಕ್ಟ್ರಿಕಲ್​, ಎಲೆಕ್ಟ್ರಾನಿಕ್ಸ್​ ಆಗಿದೆಯೆ? ಮೆಟ್ರೋ ರೈಲ್​ ಕಾರ್ಪೋರೇಷನ್​ನಲ್ಲಿ ಭರಪೂರ ಉದ್ಯೋಗ

ವಿವಿಧ ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿದೆ 25 ಹುದ್ದೆಗಳು- 45 ವರ್ಷಗಳವರೆಗೂ ಇದೆ ಅವಕಾಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − eight =
Remember me
