ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ವಿವಿಧ 5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪದವಿಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿದೆ.
ಹುದ್ದೆ ವಿವರ* ಜನರಲ್ ಮ್ಯಾನೇಜರ್ – 1ಕೃಷಿ/ ಕೃಷಿ ಮಾರುಕಟ್ಟೆ/ ಎಣ್ಣೆ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ, ಕಂಪ್ಯೂಟರ್ ಜ್ಞಾನದ ಜತೆ ವೃತ್ತಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಮಾಸಿಕ 1,04,600-1,50,600 ರೂ. ವರೆಗೆ ವೇತನ ಇದ್ದು, 40-50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಅಸಿಸ್ಟೆಂಟ್ ಮ್ಯಾನೇಜರ್ – 2ಸ್ನಾತಕೋತ್ತರ ಕೃಷಿ ಪದವಿ ಪಡೆದಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರುವ 18 ರಿಂದ 40 ವರ್ಷದೊಳಗಿನ (ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಅವಶ್ಯ. ಮಾಸಿಕ 43,100-83,900 ರೂ. ವೇತನ ಇದೆ.
* ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ – 1ಪದವಿ ಪಡೆದಿದ್ದು, 2 ವರ್ಷ ವೃತ್ತಿ ಅನುಭವ ಹೊಂದಿರುವ ಕನಿಷ್ಠ 18 ರಿಂದ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮಾಸಿಕ 21,400-42,000ರೂ. ವೇತನ ಇದೆ. ಕಂಪ್ಯೂಟರ್ ಜ್ಞಾನ ಅವಶ್ಯ.
* ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಗುಣಮಟ್ಟ ನಿಯಂತ್ರಣ) – 1ಬಿಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಅಧ್ಯಯನ ಮಾಡಿದ್ದು, ಕನಿಷ್ಠ 2 ವರ್ಷದ ವೃತ್ತಿ ಅನುಭವ ಹೊಂದಿರುವ 18-40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ಅವಶ್ಯ. ಮಾಸಿಕ 21,400-42,000ರೂ. ವೇತನ ನಿಗದಿಯಾಗಿದೆ.
ಆಯ್ಕೆ ವಿಧಾನ:ನಿಗದಿಪಡಿಸಲಾದ ವಿದ್ಯಾರ್ಹತೆ, ವೃತ್ತಿ ಅನುಭವ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 1000 ರೂ., ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಯಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 8.4.2021ಅರ್ಜಿ ಸಲ್ಲಿಕೆ ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ಕೆಸಿಒಜಿಎಫ್​. ಲಿ, ನಂ.11, 4ನೇ ಮಹಡಿ, ಬ್ಲೂೃ ಕ್ರಾಸ್ ಚೇಂಬರ್ಸ್, ಇನ್ಫೆಂಟ್ರಿ ಅಡ್ಡರಸ್ತೆ, ಬೆಂಗಳೂರು-01
ಅಧಿಸೂಚನೆಗೆ:https://bit.ly/3laOSQ7ಮಾಹಿತಿಗೆ:http://www.kof.co.in
ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಐಟಿಐ ಪದವೀಧರರಿಗೆ ಬಿಗ್​ ಆಫರ್​- 304 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಜಿನಿಯರಿಂಗ್​ ಪದವಿ ಮುಗಿಸಿರುವಿರಾ? ಕೇಂದ್ರ ಸರ್ಕಾರದಲ್ಲಿ ನಿಮಗಾಗಿ ಕಾದಿವೆ 200 ಹುದ್ದೆಗಳು

ಕ್ರೀಡಾ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆ- ₹1 ಲಕ್ಷದವರೆಗೆ ವೇತನ- 55 ವರ್ಷದವರೆಗೂ ಆದ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
