ಚೆನ್ನೈನಲ್ಲಿರುವ ರಾಷ್ಟ್ರೀಯಲ್ಯಾಬೊರೇಟರಿ ಸಿಎಸ್‍ಐಆರ್-ಸೆಂಟ್ರಲ್ ಲೆದರ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿಎಲ್‍ಆರ್‍ಐ)ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹಾಗೂ ಇತರ 31 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಸಿಎಲ್‍ಆರ್‍ಐನ ವಿವಿಧ ಯೋಜನೆಗಳಿಗೆ ವಿವಿಧ ಹಂತಗಳಲ್ಲಿ ಕೆಲಸ ಮಾಡಲು ಅರ್ಹ, ಪ್ರತಿಭಾವಂತ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅನುಗುಣವಾಗಿ ಮಾಸಿಕ 18,000 ರೂ.ನಿಂದ 35,000 ರೂ. ವರೆಗೆ ವೇತನ ನಿಗದಿಪಡಿಸಿದ್ದು, ಮನೆ ಬಾಡಿಗೆ ಭತ್ಯೆಯನ್ನು ನೀಡಲಾಗುವುದು. ಅಂತಿಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ / ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಹುದ್ದೆ, ಸಂಖ್ಯೆ ವಿವರ* ಪ್ರಾಜೆಕ್ಟ್ ಅಸೋಸಿಯೇಟ್ ಐಐ – 6* ಪ್ರಾಜೆಕ್ಟ್ ಅಸೋಸಿಯೇಟ್ ಐ – 18* ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ 1 – 1* ಪ್ರಾಜೆಕ್ಟ್ ಅಸಿಸ್ಟೆಂಟ್ – 4* ಸೈಂಟಿಫಿಕ್ ಅಡ್ಮಿನಿಸ್ಟ್ರೇಟೀವ್ ಅಸಿಸ್ಟೆಂಟ್ – 2
ವಿದ್ಯಾರ್ಹತೆಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್, ಮೆಡಿಕಲ್ ಲ್ಯಾಬೊರೇಟರಿಯಲ್ಲಿ 3 ವರ್ಷದ ಡಿಪ್ಲೋಮಾ, ಬಯೋಮೆಡಿಕಲ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್‍ಸ್ಟ್ರುಮೆಂಟೇಷನ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್‍ನಲ್ಲಿ ಪದವಿ, ಕಂಪ್ಯೂಟರ್ ಸೈನ್ಸ್/ ಇನ್ಫೋರ್ಮೇಷನ್ ಟೆಕ್ನಾಲಜಿಯಲ್ಲಿ ಬಿ.ಎಸ್‍ಸಿ, ಬಯೋಪ್ರೊಸೆಸ್ ಇಂಜಿನಿಯರಿಂಗ್, ಕೆಮಿಸ್ಟ್ರಿ, ಆರ್ಗಾನಿಕ್ ಕೆಮಿಸ್ಟ್ರಿ, ಫಿಜಿಕಲ್, ಅನಾಲಿಟಿಕಲ್ ಕೆಮಿಸ್ಟ್ರಿ/ ಬಯೋಕೆಮಿಸ್ಟ್ರಿಯಲ್ಲಿ ಎಂಎಸ್‍ಸಿ, ಬಯೋಟೆಕ್ನಾಲಜಿ, ಲೆದರ್ ಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಬಿಇ/ಬಿಟೆಕ್, ಯುಜಿಸಿ ನೆಟ್/ ಗೇಟ್, ಸಿಎಸ್‍ಐಆರ್ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಶಿಕ್ಷಣ.
ವಯೋಮಿತಿಹುದ್ದೆಗೆ ಅನುಗುಣವಾಗಿ ಗರಿಷ್ಠ 35 ರಿಂದ 50 ವರ್ಷ.
ನೇರ ಸಂದರ್ಶನ:30.12.2020 ಬೆಳಗ್ಗೆ 9ರಿಂದ ನೇರ ಸಂದರ್ಶನ ನಡೆಯಲಿದ್ದು, 11 ಗಂಟೆ ನಂತರ ಬಂದ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ. ಸಂದರ್ಶನದ ದಿನ ಮೂಲ ದಾಖಲೆ ಹಾಗೂ 2 ಪಾಸ್‍ಪೋರ್ಟ್​ ಫೋಟೋಗಳನ್ನು ತೆಗೆದುಕೊಂಡು ಹೋಗಬೇಕು. ನೇರ ಸಂದರ್ಶನಕ್ಕೆ ಹಾಜರಾದವರಿಗೆ ಪ್ರವಾಸಭತ್ಯೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನ: 23.12.2020ಅಧಿಸೂಚನೆಗೆ ಇಲ್ಲಿ ಕ್ಲಿಕ್ಕಿಸಿ:https://bit.ly/3aiP4t7
ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ:https://www.clri.org/
ಇನ್ನೂ ಹೆಚ್ಚಿನ ಉದ್ಯೋಗಗಳ ಮಾಹಿತಿಗೆ https://www.vijayavani.net/ ವಿಭಾಗದ ಅಂಕಣ ಕಾಲಂನಲ್ಲಿ ಉದ್ಯೋಗಮಿತ್ರ ಕ್ಲಿಕ್ಕಿಸಿ
ಎಸ್​ಎಸ್​ಎಲ್​ಸಿ, ಡಿಪ್ಲೋಮಾ, ಪದವೀಧರರಿಗೆ ಕೇಂದ್ರ ಸರ್ಕಾರದ 74 ಹುದ್ದೆಗಳಿಗೆ ಆಹ್ವಾನ

ಕೋರ್ಟ್​ನಲ್ಲಿವೆ ಸ್ಟೆನೋಗ್ರಾಫರ್​, ಟೈಪಿಸ್ಟ್​ , ಕಾಪಿಯಿಸ್ಟ್​ ಹುದ್ದೆಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
