ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಕಾಯಕಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿದೆ.
ಒಟ್ಟು ಹುದ್ದೆಗಳು: 25
ಅರ್ಜಿ ಸಲ್ಲಿಸಲು ಕೊನೇ ದಿನ: 10.4.2021
ಅರ್ಹತೆಗಳೇನು?* ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.* ದಿನಾಂಕ 1.1.2021ಕ್ಕೆ ಅನ್ವಯಿಸುವಂತೆ ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‍ಕಾರ್ಡ್ ಹೊಂದಿರಬೇಕು.* ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ 2 ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.* ಗರಿಷ್ಠ 45 ವರ್ಷ ಮೀರಿರಬಾರದು.* ಓದು- ಬರಹ ತಿಳಿದಿರಬೇಕು.* ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.* ಸಂವಹನ ಕೌಶಲ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಲಕ್ಷಣಗಳನ್ನು ಹೊಂದಿರಬೇಕು.* ಗ್ರಾಮ ರೋಜ್‍ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್‍ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.
ಮಾಹಿತಿಗೆ: 080-29781057
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಇಂಟರ್ನ್‍ಗಳ ನೇಮಕ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ ನೆರವು ನೀಡಲು 5 ಇಂಟರ್ನ್‍ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಸಮಾಜವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇಂಟರ್ನ್ ಅವಧಿಯು 3 ತಿಂಗಳದ್ದಾಗಿದ್ದು, ಅಗತ್ಯಕ್ಕೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ಮಾಸಿಕ 15,000 ಗೌರವಧನ ಹಾಗೂ 2000 ರೂ. ಭತ್ಯೆ ನೀಡಲಾಗುವುದು.
ಇತರ ಅರ್ಹತೆಗಳು:* ವಿದ್ಯಾರ್ಥಿಗಳು ನಿಯೋಜಿಸುವ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ಹಾಗೂ ವಾಸ ಮಾಡಲು ಸಿದ್ಧರಿರಬೇಕು.* ಇಂಟರ್ನ್‍ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ಮೇಲ್ ವಿಳಾಸ:[email protected]ಮಾಹಿತಿಗೆ: 080-22342163
ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಪ್ರೊಫೆಸರ್​, ಲ್ಯಾಬ್​ ಅಸಿಸ್ಟೆಂಟ್​ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ: ಇಂದು, ನಾಳೆ ಸಂದರ್ಶನ

ಇಂಜಿನಿಯರಿಂಗ್​ ಪದವೀಧರರಿಗೆ ರೈಲ್ವೆ ಸಚಿವಾಲಯದಿಂದ ಅರ್ಜಿ ಆಹ್ವಾನ- ಕರ್ನಾಟದಲ್ಲಿಯೂ ಅವಕಾಶ

ವಿವಿಧ ಇಂಜಿನಿಯರಿಂಗ್​ ಪದವೀಧರರಿಗೆ ಭರ್ಜರಿ ಅವಕಾಶ: ಕೇಂದ್ರ ಸರ್ಕಾರದ ಪವರ್​ಗ್ರಿಡ್​ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + eleven =
Remember me
