ಭಾರತೀಯ ಅಂಚೆ ಇಲಾಖೆಯಲ್ಲಿಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿವೆ ಉತ್ತಮ ಅವಕಾಶ. ಇಲಾಖೆಯ ನಂಜನಗೂಡು ವಿಭಾಗದಲ್ಲಿ ಡಾಕ್‌ ಸೇವಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟೂ 78 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ಪಾಸಾಗಿರಬೇಕು. 18 ರಿಂದ 40ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಿಯಲ್ಲಿ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.
ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಯಾವುದೇ ಮುಖ್ಯ ಕಚೇರಿ ಅಥವಾ ಆಯ್ದ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.
ಮಹಿಳಾ ಅಭ್ಯರ್ಥಿಗಳು, ತೃತಿಯ ಲಿಂಗಿಗಳು, ಅಂಗವಿಕಲ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನ್ ಲೈನ್ ನಲ್ಲಿ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 08226-224430 ಸಂಖ್ಯೆಗೆ ಕರೆ ಮಾಡಬಹುದು.
ಬೆಂಗಳೂರಿನ ಮಿಲಿಟರಿ ಶಾಲೆಯಲ್ಲಿವೆ 16 ಹುದ್ದೆಗಳು: ಎಸ್​ಎಸ್​ಎಲ್​ಸಿ ಆದವರಿಗೂ ಅವಕಾಶ

ಕೇಂದ್ರ ಸರ್ಕಾರದಲ್ಲಿ ಖಾಲಿ ಇವೆ ಹುದ್ದೆಗಳು: ಪದವೀಧರರಿಗೂ ಸಿಗಲಿದೆ ಅವಕಾಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × one =
Remember me
