ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಅರ್ಜಿಯ ಕೊನೆಯ ದಿನಾಂಕ 17 ಎಂದು ಮೊದಲು ತಿಳಿಸಲಾಗಿತ್ತು. ಇದೀಗ ಈ ದಿನಾಂಕವನ್ನು ಮೇ 20ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.ಶೈಕ್ಷಣಿಕ ವಿದ್ಯಾರ್ಹತೆ:2021ರ ಆಗಸ್ಟ್ 16ಕ್ಕೆ ಅನುಗುಣವಾಗಿ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.ವಯೋಮಿತಿ: 2021ರ ಏಪ್ರಿಲ್‌ 1ಕ್ಕೆ ಅನ್ವಯ ಆಗುವಂತೆ ಕನಿಷ್ಠ 20ರಿಂದ ಗರಿಷ್ಠ 28 ವರ್ಷ ವಯೋಮಿತಿ ಇರಬೇಕು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) 10 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.ವೇತನ:ತಿಂಗಳಿಗೆ 17,900/- ರಿಂದ 47,920/-ರೂಗಳ ವರೆಗೆ ವೇತನ ನಿಗದಿ ಮಾಡಲಾಗಿದೆ. ಜತೆಗೆ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳೂ ಇರಲಿವೆ.ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ:ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.ಹೆಚ್ಚಿನ ಮಾಹಿತಿಗೆhttps://www.sbi.co.in/web/careers/current-openings  ಕ್ಲಿಕ್‌  ಮಾಡಿ

ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಎಲ್ಲಾ ಪದವೀಧರರಿಗೆ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿದೆ ಉದ್ಯೋಗ: 49 ಹುದ್ದೆಗಳಿಗೆ ಆಹ್ವಾನ
ಮಂಡ್ಯದಲ್ಲಿ ವೈದ್ಯಾಧಿಕಾರಿಗಳ ನೇಮಕ- 70 ವರ್ಷಗಳವರೆಗೂ ವಯೋಮಿತಿ ನೀಡಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
