ಕೇಂದ್ರ ಸರ್ಕಾರದವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಕೇಂದ್ರ ಲೋಕ ಸೇವಾ ಆಯೋಗದಿಂದ (ಯುಪಿಎಸ್‍ಸಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 89.
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಜಲಶಕ್ತಿ ಸಚಿವಾಲಯ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಗೃಹ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇದೆ.
ಹುದ್ದೆ ವಿವರ* ಪಬ್ಲಿಕ್ ಪ್ರಾಸಿಕ್ಯೂಟರ್ – 43 * ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ – 26ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಸೆಂಟ್ರಲ್ ಬ್ಯೂರೋ ಆï ಇನ್ವೆಸ್ಟಿಗೇಷನ್ ವಿಭಾಗಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್​ಗೆ ಗರಿಷ್ಠ 35 ವರ್ಷ ಹಾಗೂ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‍ಗೆ 30 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾನೂನಿನಲ್ಲಿ ಪದವಿ, ಪಡೆದಿದ್ದು, ವೃತ್ತಿ ಅನುಭವ ಹೊಂದಿರಬೇಕು. ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸುವುದು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣ/ ಸಂಬಂಧಿತ ವಿಚಾರಣೆಗಳಿಗ ಹಾಜರಾಗುವುದು, ಕಾನೂನು ಸಲಹೆ ನೀಡುವುದು ಇವರ ಜವಾಬ್ದಾರಿಯಾಗಿರುತ್ತದೆ.
* ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ (ಸಿವಿಲ್) – 10ನೌಕರರ ರಾಜ್ಯ ವಿಮಾ ನಿಗಮದಲ್ಲಿ ಈ ಮೇಲ್ಕಂಡ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಬಿಇ, ಬಿ.ಟೆಕ್ ಪದವಿ ಪಡೆದಿದ್ದು, ಕನಿಷ್ಠ 3 ವರ್ಷ ವೃತ್ತಿ ಅನುಭವ ಇರುವ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಪ್ರೋಗ್ರಾಮರ್ (ಗ್ರೇಡ್ ಎ) – 1ಕೇಂದ್ರ ಅಂತರ್ಜಲ ಮಂಡಳಿಯಲ್ಲಿ ಈ ಹುದ್ದೆ ಖಾಲಿ ಇದ್ದು, ಸ್ಟ್ಯಾಟಿಸ್ಟಿಕ್ಸ್/ ಮ್ಯಾಥಮೆಟಿಕ್ಸ್/ ಆಪರೇಷನ್ ರಿಸರ್ಚ್/ ಫಿಜಿಕ್ಸ್ ಅಥವಾ ಎಕನಾಮಿಕ್ಸ್/ ಕಾಮರ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್‍ನಲ್ಲಿ ಪದವಿ ಪಡೆದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಎಕನಾಮಿಕ್ ಆಫೀಸರ್ – 1ಕೃಷಿ ಇಲಾಖೆಯಲ್ಲಿ ಈ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಎಕನಾಮಿಕ್ಸ್/ ಬಿಜಿನೆಸ್ ಎಕನಾಮಿಕ್ಸ್/ ಎಕನಾಮೆಟ್ರಿಕ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು.
* ಸೀನಿಯರ್ ಸೈಂಟಿಫಿಕ್ ಆಫೀಸರ್ (ಬ್ಯಾಲಿಸ್ಟಿಕ್ಸ್-1, ಬಯಾಲಜಿ-1) – 2ಫಿಜಿಕ್ಸ್/ ಫೋರೆನ್ಸಿನಿಕ್ ಸೈನ್ಸ್, ಜೂವಾಲಜಿ/ ಬಾಟ್ನಿ/ ಆಂಥ್ರಪೊಲಜಿ/ ಮೊಲೆಕ್ಯುಲರ್ ಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಗರಿಷ್ಠ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:ಎಸ್ಸಿ, ಎಸ್ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 25 ರೂ. ಶುಲ್ಕವಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 19.3.2021ಅಧಿಸೂಚನೆಗೆ:https://bit.ly/3r4edgTಮಾಹಿತಿಗೆ:http://www.upsconline.nic.in
ಉನ್ನತ ಪದವಿ ಪಡೆದವರಿಗೆ ಭರ್ಜರಿ ಅವಕಾಶ: ಕೇಂದ್ರ ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಆಹ್ವಾನ

ರಾಷ್ಟ್ರೀಯ ಮುಕ್ತ ಶಾಲೆಯಲ್ಲಿದೆ ಹಲವಾರು ಹುದ್ದೆ- ನೇರ ಸಂದರ್ಶನದಿಂದ ಪಡೆಯಿರಿ ಉದ್ಯೋಗ

ಕೇಂದ್ರ ಸರ್ಕಾರದ ಉದ್ಯೋಗ ಆಕಾಂಕ್ಷಿಗಳಾ? ಇಲ್ಲಿದೆ 152 ಹುದ್ದೆಗಳು- ₹2 ಲಕ್ಷಕ್ಕೂ ಅಧಿಕ ಸಂಬಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
