ಲಖನೌ:ಪಂಚ ರಾಜ್ಯಗಳ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಅದರಲ್ಲಿಯೂ ಉತ್ತರ ಪ್ರದೇಶ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿ ಪರಿಣಮಿಸಿದೆ. ಆದ್ದರಿಂದ ಎಲ್ಲಾ ಪಕ್ಷಗಳೂ ತಮ್ಮ ಗೆಲುವಿಗಾಗಿ ರಾತ್ರಿ-ಹಗಲು ಎನ್ನದೇ ಶ್ರಮಿಸುತ್ತಿವೆ. ಇದರ ನಡುವೆಯೇ ಕಾಂಗ್ರೆಸ್ ಪಕ್ಷವು 30 ವರ್ಷಗಳಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದು ಇತಿಹಾಸ ಸೃಷ್ಟಿಸಲಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಹಿತಿ ನೀಡಿದ್ದಾರೆ. ನಾವು ನಮ್ಮ ಸಾಮರ್ಥ್ಯದಿಂದ ಹೋರಾಡುತ್ತೇವೆ. ಕಳೆದ 30 ವರ್ಷಗಳಲ್ಲಿ ಮೊದಲ ಸಲ ಎಲ್ಲ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದೇವೆ ಎಂದು ಪ್ರಿಯಾಂಕಾ ಹೇಳಿದರು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮ್ಮುಖದಲ್ಲಿ ಗಾಜಿಯಾಬಾದ್​​ನಲ್ಲಿ ಶುಕ್ರವಾರ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಪ್ರಿಯಾಂಕಾ ಗಾಂಧಿ ನಾವು ಈ ಬಾರಿ ಚುನಾವಣೆಯಲ್ಲಿ ನಮ್ಮ ಸರ್ವ ಶಕ್ತಿಯನ್ನೂ ಧಾರೆಯೆರೆಯುತ್ತಿದ್ದೇವೆ. ಹಾಗಾಗಿ ಎಲ್ಲ 403 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತಿದ್ದೇವೆ ಎಂದರು.
ಫೆ.10 ರಂದು ಮೊದಲ ಹಂತದ ಮತದಾನ ನಡೆಯಲಿದೆ. 2, 3, 4, 5, 6 ಹಾಗೂ 7ನೇ ಹಂತದ ಮತದಾನ ಕ್ರಮವಾಗಿ ಫೆ.14, ಫೆ,20, ಫೆ,23, ಫೆ,27, ಮಾ.3 ಮತ್ತು ಮಾ.7 ರಂದು ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರಬರಲಿದೆ.
ಟೆಸ್ಲಾ ಇಲೆಕ್ಟ್ರಿಕ್‌ ಕಾರು ಭಾರತಕ್ಕೆ: ಎಲಾನ್‌ ಮಸ್ಕ್‌ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ- ಕಾರಣ ಇಲ್ಲಿದೆ…

VIDEO: ಹೊಟ್ಟೆ-ಬಟ್ಟೆ ಕಟ್ಟಿ ಮಾಡಿದ ಆಸ್ತಿ ಬರೆದು ಕೊಟ್ಟರೂ ನಿಲ್ಲದ ದಾಹ: ಕೋಟಿ-ಕೋಟಿ ಆಸ್ತಿ ಒಡತಿ ಬೀದಿ ಪಾಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
