ನವದೆಹಲಿ‌:2020ರಲ್ಲಿ ನಡೆದಿದ್ದ ಯುಪಿಎಸ್‌ಸಿ ಪರೀಕ್ಷೆಗಳಿಗೆ ‘ಕೋವಿಡ್‌ 19’ ಸೋಂಕಿನ ಭೀತಿಯಿಂದಾಗಿ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಪುನಃ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.‌
ಕರೊನಾ ಭೀತಿಯಿಂದ ಪರೀಕ್ಷೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಂದು ಅವಕಾಶ ನೀಡಬೇಕು ಎಂದು ಕೆಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಯುಪಿಎಸ್‌ಸಿ ಸಾಧ್ಯವಾಗುವುದಿಲ್ಲ ಎಂದು ಹೇಳಿಕೆ ನೀಡಿದೆ.ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಈ ಹೇಳಿಕೆಯನ್ನು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಅವರು ಕೋರಿದರು.
ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಇದೇ 25ಕ್ಕೆ ಮುಂದೂಡಿದೆ. ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಇಂಥ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.
ಮುಂದುವರೆದಿದೆ ಖಾತೆ ಎಕ್ಸ್‌ಚೇಂಜ್‌‌ ಆಟ! ನಿನ್ನೆ ಇದ್ದೋರು ಈಗಿಲ್ಲ… ಯಾರಿಗೆ ಏನು ಸಿಕ್ತು ನೋಡಿ…

ಕಬಡ್ಡಿ ಆಡುತ್ತಲೇ ಯುವಕನ ಪ್ರಾಣ ಹೋಯ್ತು! ಆಘಾತಕಾರಿ ಘಟನೆಯ ವಿಡಿಯೋ ವೈರ‌ಲ್

ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × four =
Remember me
