ಬುಲಂದ್​​ಶೆಹರ್​ (ಉತ್ತರ ಪ್ರದೇಶ):ವಿಷಪೂರಿತವಾಗಿದ್ದ ಮದ್ಯವನ್ನು ಸೇವಿಸಿ, ಐದು ಮಂದಿ ಮೃತಪಟ್ಟು, ಹಲವಾರು ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರಪ್ರದೇಶದ ಬುಲಂದ್​​ಶೆಹರ್​ನಲ್ಲಿ ನಡೆದಿದೆ.
ಅಕ್ರಮ ಮದ್ಯ ಸೇವಿಸಿ ಇವರು ಮೃತಪಟ್ಟಿದ್ದಾರೆ. ಈ ಮದ್ಯವು ವಿಷಪೂರಿತವಾಗಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅಕ್ರಮ ಸೇವನೆ ಮಾಡಿ 5 ಮಂದಿ ಮೃತರಾಗಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಸ್ತುತ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವವರಿಗೆ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆಯಾಗಿದೆ. 16 ಮಂದಿಗೆ ಡಯಾಲಿಸಿಸ್ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.
ಹೊರಗಿನಿಂದ ಬಂದ ವ್ಯಕ್ತಿಯೊಬ್ಬ ಈ ಮದ್ಯವನ್ನು ಮಾರಾಟ ಮಾಡಿದ್ದಾನೆ. ಕಡಿಮೆ ಬೆಲೆಗೆ ಸಿಕ್ಕಿದೆ ಎಂದು ಅನೇಕ ಮಂದಿ ಇದನ್ನು ಸೇವಿಸಿದ್ದಾರೆ. ಇದು ವಿಷಪೂರಿತವಾಗಿದ್ದ ಹಿನ್ನೆಲೆಯಲ್ಲಿ ಸಾವು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಮದ್ಯದಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರವೀಂದ್ರಕುಮಾರ್​ ಹೇಳಿದ್ದಾರೆ.
2021 ಆರಂಭ ಕೊಡಲಿಲ್ಲ ಲಕ್​: ರಾಗಿಣಿ ಬೇಲ್​ ಅರ್ಜಿ ಮುಂದೂಡಿಕೆ

ಕೋಳಿಗಳಲ್ಲಿ ಕಂಡುಬಂತು ಪಾಸಿಟಿವ್​: ಮಾಂಸದಂಗಡಿ ಮುಚ್ಚಲು ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

ವಿಚ್ಛೇದನ ಕೊಟ್ಟ ನಂತರ ದಿಢೀರ್​ ಮರುಮದುವೆಯಾಗಲು ಬರುವುದಿಲ್ಲ…

ಸಂಜೆ ಹೊರಕ್ಕೆ ಹೋಗದಿದ್ರೆ ರೇಪ್​ ಆಗ್ತಿರಲಿಲ್ಲ: ಮಹಿಳಾ ಆಯೋಗದ ಸದಸ್ಯೆ ಹೇಳಿಕೆಗೆ ಭುಗಿಲೆದ್ದ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 6 =
Remember me
