ನವದೆಹಲಿ:ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮ ಸ್ಫೋಟದಲ್ಲಿ ಇಲ್ಲಿಯವರೆಗೆ 32 ಮೃತದೇಹಗಳು ಪತ್ತೆಯಾಗಿವೆ. 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ರಕ್ಷಣಾ ಸಿಬ್ಬಂದಿ ಹಗಲಿರುಳು ದುಡಿಯುತ್ತಿದ್ದಾರೆ. ತಪೋವನ್ ಸುರಂಗದಲ್ಲಿ ಅಧಿಕ ಮಂದಿ ಸಿಲುಕಿದ್ದಾರೆ.
ರೈನಿ ಗ್ರಾಮದಲ್ಲಿ ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿದ್ದ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ತಪೋವನ ವಿದ್ಯುತ್ ಯೋಜನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಟನೆಲ್​ನೊಳಗೆ ಸಿಲುಕಿಕೊಂಡಿದ್ದು, ಇವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೆಲವರನ್ನು ಏರ್​ಲಿಫ್ಟ್​ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
https://www.youtube.com/watch?v=cA5-5xtMJkAಱ
ಹಿಮಪಾತ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಉತ್ತರಾಖಂಡದ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ರೈನಿಪಲ್ಲಿ, ಪಂಗ್, ಲಾಟಾ, ಸುರೈತೋಟಾ, ಸೂಕಿ, ಭಲ್ಗೋನ್, ತೋಲ್ಮಾ, ಫಾಗ್ರಸು, ಲೊಂಗ್ ಸೇಗ್ದಿ, ಗಾಹರ್, ಬಂಗ್ಯೂಲ್, ಜುವಗ್ವಾಡ್, ಜುಗ್ಜು ಸೇರಿದಂತೆ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಈ ಗ್ರಾಮಸ್ಥರಿಗೆ ಅಗತ್ಯ ಆಹಾರ ಮತ್ತು ಔಷಧಿಯನ್ನು ಪೂರೈಕೆ ಮಾಡುತ್ತಿದ್ದಾರೆ.
#WATCH| Aerial view of the devastation site in Chamoli,#Uttarakhandfrom the helicopter deployed for distribution of relief material.pic.twitter.com/UIx9FTcyo0
— ANI (@ANI)February 8, 2021

https://t.co/tRBxkfbtWaSalute to our brave soldiers ❤️
— On point 🎯 (@dilseindian011)February 7, 2021

ಹಿಮಪಾತದಿಂದಾಗಿ ಅಲಕ್ ನಂದ್ ನದಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ನೀರಿನ ಪ್ರಮಾಣ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಎನ್ ಟಿಪಿಸಿ 480 ಮೆಗಾ ವ್ಯಾಟ್ ತಪೋವನ-ವಿಷ್ಣುಗಢ್ ಹೈಡ್ರೋ ಪವರ್ ಪ್ರಾಜೆಕ್ಟ್ ಮತ್ತು 13.2 ಮೆಗಾ ವ್ಯಾಟ್ ನ ರಿಷಿಗಂಗಾ ಹೈಡಲ್ ಪ್ರಾಜೆಕ್ಟ್ ಗೆ ಹಾನಿಯಾಗಿದೆ.600ಕ್ಕೂ ಅಧಿಕ ಭಾರತೀಯ ಸೇನಾ ಯೋಧರು, ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಚಮೋಲಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮುಂದುವರೆಸಿದೆ.
ಹಿಮ ಕರಗಿ ದುರಂತ?; ವಿಜಯವಾಣಿ ಪ್ರತ್ಯಕ್ಷ ವರದಿ

ಚೆನ್ನೈಗೆ ಎಂಟ್ರಿ ಕೊಡುತ್ತಲೇ ಸರ್ಕಾರ ಶಶಿಕಲಾಗೆ ನೀಡಿತು ಬಿಗ್​ ಶಾಕ್​! ಚಿಂತಾಕ್ರಾಂತರಾದ ಚಿನ್ನಮ್ಮ

ತಂಗಿಯ ಮದುವೆಗೆ ಮೃತಪಟ್ಟ ತಂದೆಯನ್ನು ಕರೆತಂದ ಅಕ್ಕ- ಸಹೋದರಿ ಪ್ರೀತಿಗೆ ವಿವಾಹ ಮಂಟಪದಲ್ಲಿ ಕಣ್ಣೀರಧಾರೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 20 =
Remember me
