ಕೇಪ್‌ಟೌನ್:ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 3ನೇ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್‌ ಆಗುತ್ತಿದ್ದಾರೆ.
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್‌ ಕೊಹ್ಲಿ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತ್ತಿದ್ದರು. ಒಡಿಐ ತಂಡದ ನಾಯಕತ್ವ ಕಳೆದುಕೊಂಡ ಕಾರಣ ಭಾರತ ತಂಡದ ಸಾಲಿನಲ್ಲಿ ಮೊದಲಿಗನಾಗಿ ವಿರಾಟ್‌ ಕೊಹ್ಲಿ ನಿಂತಿರಲಿಲ್ಲ. ಆದರೆ ರಾಷ್ಟ್ರಗೀತೆ ಆರಂಭವಾದ ಬಳಿಕ ಕ್ಯಾಮೆರಾ ಇವರ ಕಡೆಗೆ ಫೋಕಸ್‌ ಆಗಿತ್ತು. ಇದು ನೇರ ಪ್ರಸಾರದಲ್ಲಿ ಕಂಡುಬಂದಿದೆ.

ಇದನ್ನು ಕಂಡು ಭಾರತೀಯರು ಬಹಳ ಗರಂ ಆಗಿದ್ದು, ಥಹರೇವಾರಿ ಕಮೆಂಟ್‌ ಮಾಡುತ್ತಿದ್ದಾರೆ. ರಾಷ್ಟ್ರಗೀತೆ ವೇಳೆ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತಿರುವ ಈ ವ್ಯಕ್ತಿ ನಮ್ಮ ದೇಶದ ರಾಯಭಾರಿನಾ ಎಂದು ಟ್ರೋಲ್‌ ಮಾಡುತ್ತಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ:
Virat Kohli busy chewing something while National Anthem is playing. Ambassador of the nation.@BCCIpic.twitter.com/FiOA9roEkv— Vaayumaindan (@bystanderever)January 23, 2022
Virat Kohli busy chewing something while National Anthem is playing. Ambassador of the nation.@BCCIpic.twitter.com/FiOA9roEkv
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
