ಕೋಲ್ಕತಾ:ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಮೃತಪಟ್ಟಿದ್ದಾರೆ.
ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್​ನಲ್ಲಿ ಈ ಘಟನೆ ನಡದಿದೆ. ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ನಿನ್ನೆ ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆ ಇಬ್ಬರು ಅಪರಿಚಿತರು ಧರ್ಮವೀರ್​ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಧರ್ಮವೀರ್​ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಧರ್ಮವೀರ್​ ಜತೆಗೆ ಇಬ್ಬರು ಇದ್ದು ಅವರಿಗೆ ತೀವ್ರವಾಗಿ ಗಾಯಗಳಾಗಿವೆ.
ಇದನ್ನೂ ಓದಿ:ಆತ್ಮನಿರ್ಭರ್​ ಭಾರತ್​ 3.0 ಘೋಷಣೆ- ಕಡಿಮೆ ವೇತನದಾರರಿಗೆ ಸಿಗಲಿದೆ ಇಪಿಎಫ್​
ಘಟನೆ ಹಿಂದೆ ರಾಜಕೀಯ ಕೈವಾಡವಿದೆ ಎಂಬುದನ್ನು ಸ್ಥಳೀಯ ಟಿಎಂಸಿ ನಾಯಕರು ನಿರಾಕರಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಇದು ಆಗಿರಬಹುದು ಎಂದಿದ್ದಾರೆ. ಅದೇ ಇನ್ನೊಂದೆಡೆ, ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಬಣಗಳ ನಡುವಣ ಭಿನ್ನಾಭಿಪ್ರಾಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಚುನಾವಣೆ ಬೆನ್ನಲ್ಲೇ ದೀದಿಗೆ ಬಿಗ್​ ಶಾಕ್​… ಐವರು ಸಚಿವರು ದಿಢೀರ್​ ನಾಪತ್ತೆ!

ಹೊಸ ವರ್ಷಾಚರಣೆಗೆ ಕಡಿವಾಣ​- ಇಲ್ಲಿ ಮೋಜು ಮಸ್ತಿ ಮಾಡಲು ಬಯಸಿದವರಿಗೆ ನಿರಾಸೆ

ಡ್ರೈವಿಂಗ್​ ಕಲಿಯುವವರೇ ಎಚ್ಚರ… ಟೆಕ್ಕಿಯಿಂದ ಎರಡೂವರೆ ಲಕ್ಷ ದೋಚಿದ ತರಬೇತುದಾರ​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 4 =
Remember me
