ಬೆಂಗಳೂರು:ದೆಹಲಿಯಿಂದ ಗರ್ಭಿಣಿಯೊಬ್ಬರು ಬೆಂಗಳೂರಿಗೆ ಬರುತ್ತಿರುವ ಸಂದರ್ಭದಲ್ಲಿ ಇನ್ನೇನು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್​ ಆಗಬೇಕೆನ್ನುವಷ್ಟರಲ್ಲಿಯೇ ಹೆರಿಗೆ ಆಗಿರುವ ಕುತೂಹಲ ಘಟನೆ ನಡೆದಿದೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಮಹಿಳೆ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಅಮ್ಮ-ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ.ದೆಹಲಿಯಿಂದ -ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನಯಾನ ಸಂಸ್ಥೆಯ ಫ್ಲೈಟ್​ ನಂಬರ್ 6E 122 ನಲ್ಲಿ ಈ ಮಹಿಳೆ ಹತ್ತಿದ್ದರು. ಬೆಂಗಳೂರು ತಲುಪುವಷ್ಟರಲ್ಲಿಯೇ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ. ನೋವು ಹೆಚ್ಚಾದ ಹಿನ್ನೆಲೆಯಲ್ಲಿ ವಿಮಾನಯಾನ ಸಿಬ್ಬಂದಿ ವಿಮಾನದಲ್ಲೇ ಹೆರಿಗೆ ಮಾಡಿಸಿದ್ದಾರೆ.
A baby boy was born in an IndiGo Delhi- Bangalore flight
Both mother & child are doing fine#aviationpic.twitter.com/9hlCh0f9zy
— Arindam Majumder (@ari_maj)October 7, 2020

ಅವಧಿಪೂರ್ವ ಮಗು ಇದಾಗಿದೆ. ಹೆರಿಗೆಯ ಡೇಟ್​ ಇನ್ನೂ ಬಹಳ ದೂರ ಇದ್ದುದರಿಂದ ಮಹಿಳೆ ಪ್ರಯಾಣ ಬೆಳೆಸಿದ್ದರು. ಆದರೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡು ಬಿಟ್ಟಿದೆ. ಆದರೆ ಇಂಡಿಗೋ ಸಂಸ್ಥೆ ಸಿಬ್ಬಂದಿ ಶ್ರಮದಿಂದ ತಾಯಿ ಮತ್ತು ಮಗುವಿಗೆ ಯಾವುದೇ ತೊಂದರೆಯಾಗದೆ ವಿಮಾನದಲ್ಲಿ ಸುಸೂತ್ರವಾಗಿ ಹೆರಿಗೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ವಿಮಾನ ಬರುತ್ತಲೇ ಏರ್​ಪೋರ್ಟ್​ನಲ್ಲಿ ತಾಯಿ ಮತ್ತು ಮಗುವನ್ನು ಇಂಡಿಗೋ ಸಂಸ್ಥೆ ಸಿಬ್ಬಂದಿ ಭವ್ಯ ಸ್ವಾಗತ ನೀಡಿದ್ದಾರೆ. ಇದರ ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದು ಭಾರಿ ವೈರಲ್ ಆಗಿದೆ. ಸಿಬ್ಬಂದಿಗೆ ಹಲವಾರು ಮಂದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
2019ರ ಜುಲೈ 31 ರಂದು ಲೆಬನಾನ್ ಮೂಲದ ವಿಮಾನ ದೋಹಾದಿಂದ ಬೀರಟ್‌ಗೆ ತೆರಳುವ ವೇಳೆ ಗರ್ಭಿಣಿ ಟಾಯ್ಲೆಟ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು. ಇನ್ನು ಕಳೆದ ಆಗಸ್ಟ್‌ನಲ್ಲಿ ಗರ್ಭಿಣಿಯೊಬ್ಬರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಹೆರಿಗೆಯಾಗಿತ್ತು. ಆ ಮಗುವಿಗೆ ಸ್ಕೈ ಎಂದು ನಾಮಕರಣ ಮಾಡಲಾಗಿದೆ.
ಕೆ.ಕಲ್ಯಾಣ್​ ಕುಟುಂಬದಲ್ಲಿ ಮರಳಿದ ಸಂತಸ: ವಿಚ್ಛೇದನ ವಾಪಸ್​ ಪಡೆಯಲು ಪತ್ನಿ ನಿರ್ಧಾರ?

24 ವಿಶ್ವವಿದ್ಯಾಲಯಗಳು ನಕಲಿ ಎಂದು ಘೋಷಣೆ- ಪ್ರವೇಶ​ ಪಡೆಯುವಾಗ ಎಚ್ಚರ: ಇಲ್ಲಿದೆ ವಿವರ

ಹಾಥರಸ್​ ಪ್ರಕರಣ- ಯುವತಿಯ ಕೊಲೆ ಮಾಡಿದ್ದು ಯಾರು ಎಂದು ತಿಳಿಸಿ ಪತ್ರ ಬರೆದ ಆರೋಪಿಗಳು!

ಸುಳ್ಯದಲ್ಲಿ ಶೂಟ್​ಔಟ್​: ಬಿಜೆಪಿ ಮುಖಂಡನ ಕೊಲೆ ಆರೋಪಿ ಗುಂಡಿಗೆ ಬಲಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + sixteen =
Remember me
