ಕೋಲ್ಕತ್ತಾ:ವಿಶ್ವಕಪ್ 2023 ರ ಎರಡನೇ ಸೆಮಿಫೈನಲ್‌ನ ಪಂದ್ಯ ಕೋಲ್ಕತ್ತಾದಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ ಆಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ವಾಸ್ತವವಾಗಿ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಐಸಿಸಿ ಈಗಾಗಲೇ ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ಇರಿಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಯಾವುದೇ ಅಡ್ಡಿ ಇಲ್ಲದೆ ಪೂರ್ಣಗೊಂಡಿತ್ತು. ಆದರೆ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಿನ ಕಾಳಗಕ್ಕೆ ವರುಣನ ಅವಕೃಪೆ ಎದುರಾಗಿದೆ. ಹೀಗಾಗಿ ಇಂದು ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ, ಮೀಸಲು ದಿನದಂದು ಅಂದರೆ ನಾಳೆ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.
ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ತಂಡ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ. ಬ್ಯಾಟಿಂಗ್ ಆರಂಭಿಸಿರುವ ಆಫ್ರಿಕಾ, ಆಸೀಸ್ ಬೌಲರ್​ಗಳ ದಾಳಿಗೆ ತತ್ತರಿಸಿ 14 ಓವರ್​ಗಳಲ್ಲಿ ಕೇವಲ 44 ರನ್ ಕಲೆ ಹಾಕಿ ಬರೋಬ್ಬರಿ 4 ವಿಕೆಟ್ ಕಳೆದುಕೊಂಡಿದೆ.  ಮಳೆ ಬೀಳಲಾರಂಭಿಸಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಹವಾಮಾನ ಸಂವಹನಕಾರ ನವದೀಪ್ ದಹಿಯಾ ಅವರು ಟ್ವೀಟ್ ಮಾಡಿ,ಕೋಲ್ಕತ್ತಾದಲ್ಲಿ AUS vs SA ನಡುವಿನ ಎರಡನೇ ಸೆಮಿಸ್ ಮಳೆಯ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತವು ಪಶ್ಚಿಮ ಬಂಗಾಳದ ಕರಾವಳಿಗೆ ಸಮೀಪದಲ್ಲಿದೆ, ಮೋಡ ಕವಿದ ವಾತಾವರಣವು ದಿನವಿಡೀ ಇರುತ್ತದೆ. ಮಧ್ಯಾಹ್ನ 1 ಅಥವಾ 2 ರ ನಂತರ ಯಾವುದೇ ಸಮಯದಲ್ಲಿ ತುಂತುರು ಮಳೆ ಪ್ರಾರಂಭವಾಗುತ್ತದೆ. ಸಂಜೆ 4 ರಿಂದ 6 ರ ನಡುವೆ ಲಘುವಾಗಿ ಸಾಧಾರಣ ತುಂತುರು ಮತ್ತು ನಂತರ ಕಡಿಮೆಯಾಗುವ ಸಾಧ್ಯತೆಯಿದೆ ರಾತ್ರಿಯಲ್ಲಿ ತುಂತುರು ಮಳೆಯ ಸಂಭವನೀಯತೆ ಇದೆ ಎಂದು ಟ್ವೀಟ್​​ ಮಾಡಿದ್ದಾರೆ.
ಪಂದ್ಯಕ್ಕೆ ಮಳೆ ಅಡ್ಡಿಪಡಿಸಿ, ಪಂದ್ಯ ರದ್ದಾದರೆ ಯಾರು ಫೈನಲ್​ಗೆ ಹೊಗುತ್ತಾರೆ ಎಂಬುದು ಎಲ್ಲರ ಪ್ರಶ್ನೆಯಾಗಿದೆ.ಎರಡನೇ ಸೆಮಿಫೈನಲ್‌ನಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ವಿಜೇತರು ಭಾರತವನ್ನು ಫೈನಲ್‌ನಲ್ಲಿ ಎದುರಿಸಲಿದ್ದಾರೆ.
ಸೌತ್ ಆಫ್ರಿಕಾ (ಪ್ಲೇಯಿಂಗ್ XI):ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಕಗಿಸೊ ರಬಾಡ, ತಬ್ರೇಝ್ ಶಮ್ಸಿ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI):ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − nine =
Remember me
