ಜಲಗಾಂವ್:ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್​ಮ್ಯಾನ್​) ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್) ನಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ.
ಇದನ್ನೂ ಓದಿ:ಯುವ ನಾಯಕನಿಂದ ಶಾಕ್ ಆದ ಚಿರಂಜೀವಿ.. ಅದೇ ಸಮಯದಲ್ಲಿ ಮೆಗಾಸ್ಟಾರ್ ಗೆ ಮೋಸ ಮಾಡಿದ್ದಾನಾ?
ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾಮ್ನೇರ್‌ನ ಪ್ರಕಾಶ್ ಕಾಪ್ಡೆ (39) ಸಚಿನ್ ತೆಂಡೂಲ್ಕರ್ ಅವರ ಗನ್​ಮ್ಯಾನ್​ ಆಗಿ ನಿಯೋಜನೆಗೊಂಡಿದ್ದರು. ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಮನೆಯಲ್ಲೇ ಇದ್ದರು ಎನ್ನಲಾಗಿದೆ. ಬುಧವಾರ ಮಧ್ಯರಾತ್ರಿ 1.30ರ ಸುಮಾರಿಗೆ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಇದು ಅವರ ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಪ್ರಕಾಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. .
ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತಿಳಿಯಲು ಪ್ರಕಾಶ್ ಅವರ ಪೋಷಕರು, ಪತ್ನಿ, ಮಕ್ಕಳು, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿವಿಐಪಿ ಭದ್ರತಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಎಸ್ ಆರ್ ಪಿಎಫ್ ಕೂಡ ಸ್ವತಂತ್ರ ತನಿಖೆ ನಡೆಸುತ್ತಿದೆ.
ಮಕ್ಕಳಿಗಾಗಿ ಗರ್ಭಧರಿಸುವ ಅಗತ್ಯವಿಲ್ಲ ಎಂದ ಹೀರೋಯಿನ್​ ಉಲ್ಟಾ ಹೊಡೆದಿದ್ದೇಕೆ? ನಾಯಕಿಯ ಪೋಸ್ಟ್ ವೈರಲ್​

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 − 4 =
Remember me
