ನವದೆಹಲಿ:ಮೊದಲಿನಿಂದಲೂ ಮೂರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟಿಸುತ್ತಿರುವ ಬಿಜೆಪಿಯ ಬಹುಕಾಲದ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ(ಎಸ್​ಎಡಿ) ಇಂದು ಮೈತ್ರಿಕೂಟದಿಂದ ಹೊರಬಿದ್ದಿದೆ.
ಮೂರು ಕೃಷಿ ಮಸೂದೆಗಳು ಅಂಗೀಕಾರಗೊಂಡಿದ್ದಕ್ಕೆ ನಮ್ಮ ಒಪ್ಪಿಗೆಯಿಲ್ಲ. ಇವು ರೈತ ವಿರೋಧಿಯಾಗಿದ್ದು ಅಂಕಿತ ಹಾಕದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಮನವಿ ಮಾಡಿದ್ದೇವೆ. ಎನ್​ಡಿಎ ಮೈತ್ರಿಕೂಟ ತೊರೆಯಲು ನಮ್ಮ ಪಕ್ಷದ ಕೋರ್​ ಕಮಿಟಿಯ ಎಲ್ಲ ನಾಯಕರೂ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದು  ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.
ನಾವು ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಅಷ್ಟೇ ಮೈತ್ರಿ ಕಳಚಿಕೊಂಡಿದ್ದೇವೆ..ಆದರೆ ಉಳಿದ ವಿಚಾರಗಳಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ನಮ್ಮ ಬೆಂಬಲ ಇದೆ ಎಂದೂ ಸ್ಪಷ್ಟಪಡಿಸಿದ್ದಾರೆ.
ಮಸೂದೆಗಳನ್ನು ವಿರೋಧಿಸಿ ಸುಖ್ಬೀರ್ ಅವರ ಪತ್ನಿ ಹರ್ಸಿಮ್ರತ್ ಕೌರ್ ತಮ್ಮ ಕೇಂದ್ರ ಸಚಿವೆ ಸ್ಥಾನಕ್ಕೆ ಕಳೆದ ಸೆ.17ರಂದು ರಾಜೀನಾಮೆ ನೀಡಿದ್ದರು.   ಬಿಜೆಪಿಯ ಜತೆ 22 ವರ್ಷಗಳ ಕಾಲದ ನಂಟು ಹೊಂದಿರುವ ಅಕಾಲಿ ದಳ ಪಂಜಾಬ್​ನಲ್ಲಿ ಹೆಚ್ಚಿನ ಸಂಖ್ಯೆಯ ರೈತ ಮತದಾರರನ್ನು ಹೊಂದಿದೆ.  (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eleven =
Remember me
