ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಸಾಧು ಒಬ್ಬರ ಮೇಲೆ ಇಬ್ಬರು ಯುವಕರು ಅಮಾನುಷವಾಗಿ ಹಲ್ಲೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶ ಅಲಿಗಢದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಸಾಧು ಗಜರಾಜ್​​ ಸಿಂಗ್​ ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
रामराज्य में साधू संतों के ऊपर हमला 😢उत्तर प्रदेश – अलीगढ़ में एक साधू के साथ मारपीट की, उसके बाद पैर पकड़कर दूर तक घसीटा, वीडियो वायरल।pic.twitter.com/TafdxtBqGU
ಇದನ್ನೂ ಓದಿ:ಕೆಕೆಆರ್​ ವಿರುದ್ಧ 7 ವಿಕೆಟ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಅಲಿಗಢ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ನಡೆದ ವೇಳೆ ಮಜೋಲಾ ಗ್ರಾಮದ ಗಬೀಸ್ ಮತ್ತು ರಾಜೇಶ್ ಇಬ್ಬರು ಪಾನಮತ್ತರಾಗಿದ್ದರು. ಈ ವೇಳೆ ಪೆಟ್ರೋಲ್​ ಬಂಕ್​ನಲ್ಲಿದ್ದ ಸಾಧು ಗಜರಾಜ್​​ ಸಿಂಗ್​ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಈವರೆಗೆ ತಿಳಿದು ಬಂದಿಲ್ಲ. ಗಾಯಗೊಂಡಿರುವ ಸಾಧು ಗಜರಾಜ್​ ಸಿಂಗ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ಸಾಧು ಮೇಲಿನ ಹಲ್ಲೆಯನ್ನು ಖಂಡಿಸಿರುವ ನೆಟ್ಟಿಗರು ಯಾವ ಸುಮ್ಮನೆ ಇದ್ದವರ ಮೇಲೆ ಈ ರೀತಿ ಮಾರಣಾಂತಿಕ ಹಲ್ಲೆ ನಡೆಸಿರುವುದು ಸರಿಯಲ್ಲ. ಆರೋಪಿಗಳು ಯಾರೇ ಆಗಿದ್ದರೂ ಎಷ್ಟೇ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿ ಮಾಡಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + ten =
Remember me
