ನವದೆಹಲಿ:ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್​ ಪುತ್ರ ಉದಯನಿಧಿ ಸ್ಟಾಲಿನ್​ ನೀಡಿದ ಸನಾತನ ಧರ್ಮ ವಿರುದ್ಧದ ಹೇಳಿಕೆಗೆ ಇದೀಗ ದೇಶವ್ಯಾಪಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ಹೇಳಿಕೆಗೆ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ
ಸನಾತನ ಧರ್ಮ ವಿವಾದದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ, “ನಾವು ಯಾವುದೇ ಧರ್ಮವನ್ನು ಟೀಕಿಸುವುದಿಲ್ಲ. ಆದ್ರೆ, ನಮ್ಮ ‘ಧರ್ಮ’ವನ್ನು ಯಾರಾದರೂ ಪ್ರಶ್ನಿಸಿದರೆ, ನಾವು ಅವರಿಗೆ ತಕ್ಕ ಉತ್ತರವನ್ನು ನೀಡುತ್ತೇವೆ. 2024 ರಲ್ಲಿ ಅವರು ಉತ್ತರವನ್ನು ಪಡೆಯುತ್ತಾರೆ” ಎಂದು ಹೇಳಿದರು.
ಇದನ್ನೂ ಓದಿ:ಕಾಳಗಿ; ಸುಂಠಾಣದಲ್ಲಿ ನೆಚ್ಚಿನ ಶಿಕ್ಷಕರನ್ನು ಆತ್ಮೀಯವಾಗಿ ಬೀಳ್ಕೊಟ್ಟ ಮಕ್ಕಳು, ಗ್ರಾಮಸ್ಥರು
ಸನಾತನ ಧರ್ಮ ವಿವಾದಕ್ಕೆ ಕಾರಣವೇನು?:ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಕೊರೊನಾ, ಮಲೇರಿಯಾ, ಡೆಂಗ್ಯೂ ವೈರಸ್​ಗಳನ್ನು ನಿರ್ಮೂಲನೆ ಮಾಡಿದಂತೆ ಇದನ್ನು ಕೂಡ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ದೇಶದೆಲ್ಲೆಡೆ ಭಾರೀ ಆಕ್ರೋಶಕ್ಕೆ ಗುರಿಯಾಗಿದೆ,(ಏಜೆನ್ಸೀಸ್).
ಬಹುನಿರೀಕ್ಷಿತ ‘ದಿ ವ್ಯಾಕ್ಸಿನ್​ ವಾರ್​’ ಟ್ರೇಲರ್​ ಔಟ್​; ವಿವೇಕ್​ ಅಗ್ನಿಹೋತ್ರಿಗೆ ಪ್ರೇಕ್ಷಕರು​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seventeen =
Remember me
