ನವದೆಹಲಿ:ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕಳೆದ ಕೆಲ ದಿನಗಳ ಹಿಂದೆ ಸಮಾಜವಾದಿ ಪಕ್ಷದ ಫಹಾದ್ ಅಹ್ಮದ್ ಜತೆಗೆ ವಿವಾಹವಾಗಿದ್ದರು. ಇದು ದೇಶದಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ವೇದಿಕೆಯೊಂದರಲ್ಲಿ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಮಾತನಾಡುತ್ತಾ, ಸ್ವರಾ ಭಾಸ್ಕರ್​ಗೆ ಟಾಂಗ್ ಕೊಟ್ಟಿದ್ದಾರೆ. ಯಾವುದಕ್ಕೂ ಒಮ್ಮೆ ಮನೆಯ ಫ್ರಿಡ್ಜ್​ನ್ನು ನೋಡಿ ಬಿಡಿ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಶ್ರದ್ಧಾ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆಕೆಯ ಪ್ರಿಯಕರ ಆಫ್ತಾಬ್ ಪೂನಾವಾಲಾ ಶ್ರದ್ಧಾಳ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಮನೆಯ ಫ್ರಿಡ್ಜ್​ನಲ್ಲಿಟ್ಟಿದ್ದ. ಸ್ವರಾ ಭಾಸ್ಕರ್, ಫಹಾದ್​ನನ್ನು ಮದುವೆಯಾಗುವ ಮೊದಲು ಈ ಪ್ರಕರಣವನ್ನು ನೆನಪಿಸಿಕೊಳ್ಳಬೇಕಾಗಿತ್ತು. ಇದು ಆಕೆಯ ವೈಯಕ್ತಿಕ ನಿರ್ಧಾರ. ಆದರೆ ಶ್ರದ್ಧಾಗೆ ಆದಂತೆ ಸ್ವರಾಗೂ ಇದೇ ಗತಿ ಆಗಬಾರದು ಎಂದೇನಿಲ್ಲ ಎಂದು ಸಾಧ್ವಿ ಪ್ರಾಚಿ ಹೇಳಿದ್ದಾರೆ. ಸ್ವರಾ ಭಾಸ್ಕರ್ ಹಿಂದು ಹುಡುಗಿಯಾಗಿದ್ದು ಮುಸ್ಲಿಂನನ್ನು ಮದುವೆ ಆಗಿದ್ದರಿಂದ ಸಹಜವಾಗಿಯೇ ಚರ್ಚೆಗೆ ಕಾರಣವಾಗಿತ್ತು.
ಇದನ್ನೂ ಓದಿ:ಮೈಸೂರಿನಲ್ಲಿ ಕೋರ್ಟ್​ಗೆ ಹಾಜರಾದ ರಾಖಿ ಸಾವಂತ್; ಆದಿಲ್​ ಖಾನ್​​ನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು
ಸಾಧ್ವಿ ಪ್ರಾಚಿ ಮಾತನಾಡುತ್ತಾ,ಸ್ವರಾ ಭಾಸ್ಕರ್ ಹಿಂದುತ್ವ ವಿರೋಧಿ ಎಂಬುದು ಈ ಮೊದಲೇ ನನ್ನ ಗಮನಕ್ಕೆ ಬಂದಿತ್ತು. ಇದೀಗ ಇಸ್ಲಾಂ ಧರ್ಮಕ್ಕೆ ಸೇರಿದಾತನೊಂದಿಗೆ ಮದುವೆ ಆಗುವ ಮೂಲಕ ನನ್ನ ಅನುಮಾನ ನಿಜವಾಗಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fifteen =
Remember me
