ಲಖನೌ:ಉತ್ತರ ಪ್ರದೇಶದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಅನೇಕರು ಯೋಗಿ ಆದಿತ್ಯಾನಾಥ್​ ಸರ್ಕಾರಕ್ಕೆ ಅಭಿನಂದಿಸುತ್ತಿದ್ದಾರೆ. ಅದೇ ರೀತಿ ಬ್ಯಾಡ್ಮಿಂಟರ್ ತಾರೆ ಸೈನಾ ನೆಹ್ವಾಲ್ ಕೂಡ ಅಭಿನಂದಿಸಿದ್ದು, ಅದಕ್ಕೆ ಆರ್​ಜೆಡಿ ಅಧ್ಯಕ್ಷರು ವ್ಯಂಗ್ಯ ಮಾಡಿದ್ದಾರೆ.
ಶನಿವಾರದಂದು ‘ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ್ದಕ್ಕೆ ತಮಗೆ ಅಭಿನಂದನೆಗಳು’ ಎಂದು ಸೈನಾ ಟ್ವೀಟ್ ಮಾಡಿದ್ದರು. ಟ್ವೀಟ್​ನಲ್ಲಿ ಯೋಗಿ ಅವರನ್ನೂ ಟ್ಯಾಗ್ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್​ಎಲ್​ಡಿ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ, “ಜನರ ತೀರ್ಪನ್ನು ಹಾಳುಮಾಡುವ ಬಿಜೆಪಿ ಕೌಶಲ್ಯವನ್ನು ಸರ್ಕಾರಿ ಶೆಟ್ಲರ್ ಗುರುತಿಸಿದ್ದಾರೆ. ಸೆಲೆಬ್ರಿಟಿಗಳು ಅವರ ನಿರ್ಧಾರಗಳ ಮೂಲಕ ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ. ಹೀಗಿರುವಾಗ ಮತದಾರರು ಸೆಲೆಬ್ರಿಟಿಗಳ ಹೇಳಿಕೆಗಳ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.
75 ಸ್ಥಾನಗಳ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ 67 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಕೇವಲ ಐದು ಸ್ಥಾನಗಳನ್ನು ಗೆದ್ದಿದೆ. ರಾಷ್ಟ್ರೀಯ ಲೋಕ ದಳ, ಜನ್ಸತ್ತ ದಳ ಮತ್ತು ಸ್ವತಂತ್ರ ಅಭ್ಯರ್ಥಿ ತಲಾ ಒಂದು ಸ್ಥಾನ ಗೆದ್ದರು. ಮಾಯಾವತಿಯ ಬಹುಜನ ಸಮಾಜ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 2016ರ ಚುನಾವಣೆಯಲ್ಲಿ, ಯಾದವ್ ಅವರ ಪಕ್ಷವು 75 ಸ್ಥಾನಗಳಲ್ಲಿ 60 ಸ್ಥಾನಗಳನ್ನು ಪಡೆದುಕೊಂಡಿತ್ತು. (ಏಜೆನ್ಸೀಸ್)
ವೇದಿಕೆಯ ಮೇಲೇ ವನಿತಾಗೆ ಅವಮಾನಿಸಿದ ರಮ್ಯಾ ಕೃಷ್ಣ!? ಡ್ಯಾನ್ಸ್ ಶೋನಿಂದ ಹೊರಬಂದ ನಟಿ ಹೇಳಿದ್ದೇನು?

ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 6 =
Remember me
